ಸಿದ್ದಾಪುರ, ಸೆ 25: ಬಿಳುಗುಂದ ಗ್ರಾ.ಪಂ ವ್ಯಾಪ್ತಿಗೊಳಪಡುವ 2019-20 ನೇ ಸಾಲಿನ ಜಮಾಬಂದಿ ಸಭೆಯು ಪಂಚಾಯಿತಿ ಕಚೇರಿಯಲ್ಲಿ ನಡೆಯಿತು. ಪಂಚಾಯಿತಿ ಆಡಳಿತ ಅಧಿಕಾರಿ ಎಂ.ಈ ಸುರೇಶ್ ಅಧ್ಯಕ್ಷತೆ ವಹಿಸಿದ್ದರು.

ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಮಂಜುನಾಥ್ ಗ್ರಾ.ಪಂ ವ್ಯಾಪ್ತಿಯಲ್ಲಿ ನಡೆದಿರುವ ಕಾಮಗಾರಿಗಳ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಗ್ರಾಮಸ್ಥರಿಗೆ ಮಾಹಿತಿ ನೀಡಿದರು. ಸಭೆಯಲ್ಲಿ ಹಾಜರಿದ್ದ ಗ್ರಾಮಸ್ಥರು ಯಾವುದೇ ಆಕ್ಷೇಪಣೆಗಳನ್ನು ಸಲ್ಲಿಸಲಿಲ್ಲ.