ನಾಪೆÇೀಕ್ಲು, ಸೆ. 28: ಮಹಿಳೆಯರು, ಬಾಣಂತಿಯರು ಪೌಷ್ಠಿಕಾಂಶವುಳ್ಳ ಆಹಾರ ಪದಾರ್ಥವನ್ನು ಬಳಕೆ ಮಾಡುವ ಮೂಲಕ ಉತ್ತಮ ಆರೋಗ್ಯವನ್ನು ಹೊಂದಬೇಕು ಎಂದು ವೈಧ್ಯಾಧಿಕಾರಿ ಶುಭಾ ಹೇಳಿದರು. ಬಲ್ಲಮಾವಟಿ ಗ್ರಾಮದ ಆಯುರ್ವೇದ ಕ್ಷೇಮ ಕೇಂದ್ರದಲ್ಲಿ ಏರ್ಪಡಿಸಲಾಗಿದ್ದ ಪೆÇೀಷಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅಧ್ಯಕ್ಷತೆಯನ್ನು ತಾಲೂಕು ಪಂಚಾಯಿತಿ ಸದಸ್ಯೆ ಕೋಡಿಯಂಡ ಇಂದಿರಾ ಹರೀಶ್ ವಹಿಸಿದ್ದರು. ಬಲ್ಲಮಾವಟಿ ಗ್ರಾಮದ ಕಾವೇರಿ ಮಹಿಳಾ ಸಮಾಜದ ಅಧ್ಯಕ್ಷೆ ಮೂವೇರ ರೇಖಾ ಪ್ರಕಾಶ್ ಹಾಜರಿದ್ದರು.

ಕಾರ್ಯಕ್ರಮದಲ್ಲಿ ಗ್ರಾಮದ ಮೂರು ಮಂದಿ ಗರ್ಭಿಣಿಯರಿಗೆ ಹಣ್ಣು ಹಂಪಲು ನೀಡಿ ಸತ್ಕರಿಸಲಾಯಿತು. ಕಿರಿಯ ಮಹಿಳಾ ಆರೋಗ್ಯ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತಿತರರು ಉಪಸ್ಥಿತರಿದ್ದರು.

ನೆಲ್ಲಿಹುದಿಕೇರಿ

ಸಿದ್ದಾಪುರ : ನೆಲ್ಯಹುದಿಕೇರಿ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಪೋಷಣ ಅಭಿಯಾನ ಕಾರ್ಯಕ್ರಮವು ನಡೆಯಿತು. ನೆಲ್ಯಹುದಿಕೇರಿ ಗ್ರಾಮದ ಆರೋಗ್ಯ ಶುಶ್ರೂಷಕಿ ಅಂಜಲೀನಾ ಲೋಬೋ ಮಾತನಾಡಿ ಗರ್ಭಿಣಿ ಸ್ತ್ರೀಯರು ಹಾಗೂ ಮಕ್ಕಳು ಪೌಷ್ಟಿಕ ಆಹಾರಗಳನ್ನು ಸೇವಿಸುವಂತೆ ಮಾಹಿತಿಗಳನ್ನು ನೀಡಿದರು. ಗರ್ಭಿಣಿ ಸ್ತ್ರೀಯರಿಗೆ ಪೌಷ್ಟಿಕ ಆಹಾರ ಪದಾರ್ಥಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಅಂಗನವಾಡಿ ಶಿಕ್ಷಕಿ ಫಿಲೋಮಿನಾ, ಗ್ರಾ.ಪಂ. ಮಾಜಿ ಸದಸ್ಯ ಅಫ್ಸಲ್ ಹಾಗೂ ಆಶಾ ಕಾರ್ಯಕರ್ತರು ಇನ್ನಿತರರು ಹಾಜರಿದ್ದರು.

ಮುಳ್ಳುಸೋಗೆ

ಕೂಡಿಗೆ : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆರೋಗ್ಯ ಇಲಾಖೆ ಹಾಗೂ ಮುಳ್ಳುಸೋಗೆ ಗ್ರಾಮ ಪಂಚಾಯತಿ ಮತ್ತು ಅಂಗನವಾಡಿಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಪೆÇೀಷಣಾ ಅಭಿಯಾನ ಮತ್ತು ಅ.ಆರೋಗ್ಯ ಜಾಗ್ರತೆ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆ ಯನ್ನು ನಿವೃತ್ತ ಮುಖ್ಯ ಶಿಕ್ಷಕ ರೇವಪ್ಪ ನೆರವೇರಿಸಿದರು.

ಮುಳ್ಳುಸೋಗೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹೆಚ್.ಎಸ್. ರಾಜಶೇಖರ್ ಇಲಾಖೆಯ ಯೋಜನೆಯನ್ನು ಮಹಿಳೆ ಯರು ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು. ಆರೋಗ್ಯ ಸಹಾಯಕಿ ಸುಮತಿ ಸೇರಿದಂತೆ ಎರಡು ಗ್ರಾಮದ ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದರು ಇದೆ ಸಂದರ್ಭ ಆರೋಗ್ಯವಂತ ಶಿಶುಗಳ ಪ್ರದರ್ಶನದಲ್ಲಿ ಬಹುಮಾನ ವನ್ನು ವಿತರಣೆ ಮಾಡಲಾಯಿತು.

ಮಸಗೋಡು : ಮಕ್ಕಳ ಸಹಾಯವಾಣಿ ಕೇಂದ್ರದ ವತಿಯಿಂದ ಸಮೀಪದ ಮಸಗೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ, ದೌರ್ಜನ್ಯ ತಡೆ ಕಾಯ್ದೆಗಳ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು.

ಮಕ್ಕಳ ಸಹಾಯವಾಣಿ ಕೇಂದ್ರದ ಕಾರ್ಯಕರ್ತೆ ಬಿ.ಕೆ. ಕುಮಾರಿ ಅವರು ಭಾಗವಹಿಸಿ ಮಾತನಾಡಿದರು.

ಬಾಲ್ಯವಿವಾಹ ರದ್ಧತಿ, ಬಾಲಕಾರ್ಮಿಕ ಪದ್ಧತಿ ನಿಯಂತ್ರಣದ ಬಗ್ಗೆ ಮಾಹಿತಿ ನೀಡಿದ ಅವರು, ದೌರ್ಜನ್ಯಗಳಿಗೆ ಸಿಲುಕಿಕೊಳ್ಳುವ ಮಕ್ಕಳನ್ನು ರಕ್ಷಿಸಿ ಪುನರ್ವಸತಿ ಕೇಂದ್ರದಲ್ಲಿ ಉಪಚರಿಸಲಾಗುವದು. ಈ ಬಗ್ಗೆ ಚೈಲ್ಡ್‍ಲೈನ್ ಹೆಲ್ಪ್‍ಲೈನ್ ಸಂಖ್ಯೆ (1098)ಗೆ ಮಾಹಿತಿ ನೀಡುವಂತೆ ಮನವಿ ಮಾಡಿದರು.

ಈ ಸಂದರ್ಭ ಮಕ್ಕಳ ಸಹಾಯವಾಣಿ ಕೇಂದ್ರದ ಯೋಗೇಶ್, ಶಾಲಾ ಶಿಕ್ಷಕ ಉದಯ್ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.