ಮುಳ್ಳೂರು, ಸೆ. 29: ಮೂದ್ರವಳ್ಳಿ ಭೈರಾಚಾರ್ಯ ದೇವಮ್ಮ ಸ್ಮಾರಕ ದತ್ತಿ ಹಾಗೂ ಶನಿವಾರಸಂತೆ ಲಯನ್ಸ್ ಕ್ಲಬ್ ಮತ್ತು ಭಾರತಿ ವಿದ್ಯಾಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಅ.2ರಂದು ಶನಿವಾರಸಂತೆ ಭಾರತಿ ಪ.ಪೂ. ಕಾಲೇಜಿನ ನಿಡ್ತ ಬಸಪ್ಪ ಸಭಾಂಗಣದಲ್ಲಿ ಗಾಂಧಿ ಜಯಂತಿ ಆಚರಣೆ ಹಾಗೂ ಶನಿವಾರಸಂತೆ ಹೋಬಳಿ ವ್ಯಾಪ್ತಿಯ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾಧಕರು ಮತ್ತು ಹತ್ತನೆ ತರಗತಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಮತ್ತು ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸ್ಮಾರಕ ದತ್ತಿನಿಧಿ ಸ್ಥಾಪಕ ಬಿ.ಬಿ.ಶಿವಣ್ಣ ಶೀತಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅ.2ರಂದು ಬೆಳಗ್ಗೆ 10-30 ಗಂಟೆಗೆ ನಡೆಯಲಿರುವ ಕಾರ್ಯಕ್ರಮ ವನ್ನು ಶನಿವಾರಸಂತೆ ಲಯನ್ಸ್ ಕ್ಲಬ್ ಖಜಾಂಜಿ ಮತ್ತು ಹಿರಿಯ ಮುಖಂಡ ಬಿ.ಕೆ.ಚಿಣ್ಣಪ್ಪ ಉದ್ಘಾಟಿಸಲಿದ್ದು, ಭಾರತಿ ವಿದ್ಯಾಸಂಸ್ಥೆ ಅಧ್ಯಕ್ಷ ಎನ್.ಬಿ.ನಾಗಪ್ಪ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಶನಿವಾರಸಂತೆ ಲಯನ್ಸ್ ಕ್ಲಬ್ ಅಧ್ಯಕ್ಷ ಬಿ.ಸಿ.ಧರ್ಮಪ್ಪ ಪಾಲ್ಗೊಳ್ಳಲಿದ್ದಾರೆ. ಮಹಾತ್ಮ ಗಾಂಧೀಜೀ ಅವರ ಆದರ್ಶದ ಕುರಿತು ಶನಿವಾರಸಂತೆ ವಿಘ್ನೇಶ್ವರ ಬಾಲಕಿಯರ ಪ್ರೌಢಶಾಲೆಯ ಶಿಕ್ಷಕ ಕೆ.ಪಿ.ಜಯಕುಮಾರ್, ಪ್ರಸ್ತುತ ವಿದ್ಯಾಮಾನಗಳು ಕುರಿತು ಶನಿವಾರಸಂತೆ ಪತ್ರಕರ್ತರ ಸಂಘದ ಅಧ್ಯಕ್ಷ ಎಚ್.ಆರ್.ಹರೀಶ್ ಉಪನ್ಯಾಸ ನೀಡಲಿದ್ದಾರೆ ಎಂದು ಶಿವಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.