ಮಡಿಕೇರಿ, ಅ. 1: ವೀರಾಜಪೇಟೆ ಪಟ್ಟಣ ವ್ಯಾಪ್ತಿಯಲ್ಲಿ ಬಿ.ಶೆಟ್ಟಿಗೇರಿ, ವೀರಾಜಪೇಟೆ, ಬೇತ್ರಿ ಪಾಲಂಗಾಲ, ಕ್ಲಬ್ ಮಹೇಂದ್ರ ಮತ್ತು ಹೆಗ್ಗಳ ಫೀಡರ್‍ನಲ್ಲಿ ವಿದ್ಯುತ್ ಜಾಲದ ಸಮಗ್ರ ಅಭಿವೃದ್ದಿ ಯೋಜನೆ ಹಾಗೂ ತುರ್ತು ನಿರ್ವಹಣೆ ಕಾಮಗಾರಿ ನಡೆಸಬೇಕಿದ್ದು, ತಾ.3 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿ ಸಲಾಗುವುದು.

ಆದ್ದರಿಂದ, ಬಿಟ್ಟಂಗಾಲ, ಬಿ.ಶೆಟ್ಟಿಗೇರಿ, ವಿ.ಬಾಡಗ, ಕಾಕೋಟುಪರಂಬು, ಮಾರೂರು, ಬೇತ್ರಿ, ಕಡಂಗಮರೂರು, ಮೈತಾಡಿ, ಪಾಲಂಗಾಲ, ಕೆದಮುಳ್ಳೂರು, ಮಹೇಂದ್ರ, ಆರ್ಜಿ, ಹೆಗ್ಗಳ, ಪೆರಂಬಾಡಿ ಹಾಗೂ ಸುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ಈ ಮೇಲೆ ತಿಳಿಸಿರುವ ಸಮಯದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.