ಕೂಡಿಗೆ, ಅ. 1: ಶಿರಂಗಾಲ ಗ್ರಾಮ ಪಂಚಾಯತಿ ವತಿಯಿಂದ ವ್ಯಾಪ್ತಿಯ ಗ್ರಾಮಗಳಲ್ಲಿ ಕರ ವಸೂಲಾತಿಯ ಆಂದೋಲನದ ಕಾರ್ಯಕ್ರಮ ನಡೆಸುವುದರ ಮೂಲಕ ಗ್ರಾಮಸ್ಥರಲ್ಲಿ ಕಂದಾಯವನ್ನು ಕಟ್ಟಲು ಜಾಗೃತಿ ಮೂಡಿಸಲಾಯಿತು.

ಪಂಚಾಯತಿ ಆಡಳಿತ ಅಧಿಕಾರಿ ಸೀಮಾ ಚಾಲನೆ ನೀಡಿ ನಂತರ ಮಾತಾಡುತ್ತ ಗ್ರಾಮದ ಅಭಿವೃದ್ಧಿಗೆ ಗ್ರಾಮಸ್ಥರು ತಮ್ಮ ಮನೆ ಮತ್ತು ನೀರಿನ. ಇತರೆ ಕರಗಳನ್ನು ಕಟ್ಟುವ ಮೂಲಕ ಗ್ರಾಮದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಸಹಕಾರಿಗಳಾಗಬೇಕೆಂದು ಮನವಿಯನ್ನು ಮಾಡಿದರು.

ಅಭಿವೃದ್ಧಿ ಅಧಿಕಾರಿ ಹರೀಶ್ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಗ್ರಾಮಸ್ಥರು ಉದ್ಯೋಗ ಖಾತರಿಯಲ್ಲಿ ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳುವ ಮೂಲಕ ಇಂಗು ಗುಂಡಿ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಮಾಡಬಹುದಾಗಿದೆ. ಈ ಯೋಜನೆಗಳನ್ನು ಬಳಕೆಮಾಡಿಕೊಳ್ಳುವಂತೆ ಜನರಿಗೆ ಮಾಹಿತಿಯನ್ನು ನೀಡಿದರು. ಈ ಸಂದರ್ಭ ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಹಾಜರಿದ್ದರು.