ಮಡಿಕೇರಿ, ಅ. 1: ತಾ. 2 ರಂದು ಗಾಂಧಿ ಜಯಂತಿ ಅಂಗವಾಗಿ ಸರ್ವೋದಯ ಸಮಿತಿಯ ವತಿಯಿಂದ ನಾಳೆ ಬೆಳಿಗ್ಗೆ 9 ಗಂಟೆಗೆ ಗಾಂಧಿ ಪ್ರತಿಮೆಗೆ ಮಾಲಾರ್ಪಣೆಯ ನಂತರ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ದೇಶ ಭಕ್ತಿ ಗೀತೆ ಸ್ಪರ್ಧೆ ಏರ್ಪಡಿಸಲಾಗಿದೆ. ಅಂಬೆಕಲ್ ಕುಶಾಲಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಗಾಂಧಿ ವಿಚಾರಧಾರೆಗಳ ಕುರಿತು ಸಮಿತಿಯ ನಿಕಟ ಪೂರ್ವ ಅಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಲಿದ್ದಾರೆ ಎಂದು ಸರ್ವೋದಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಮುನೀರ್ ಅಹ್ಮದ್ ತಿಳಿಸಿದ್ದಾರೆ.