ಸೋಮವಾರಪೇಟೆ,ಅ.1: ಇಲ್ಲಿನ ರೋಟರಿ ಸಂಸ್ಥೆಯ ವತಿಯಿಂದ ಮಹಿಳಾ ಸಮಾಜದಲ್ಲಿ ಗುರುವಂದನೆ, ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚಿನ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ನೇರುಗಳಲೆ ಶಾಲಾ ಶಿಕ್ಷಕಿ ಶಶಿಕಲಾ ಅವರನ್ನು ಸನ್ಮಾನಿಸಲಾಯಿತು. ಎಸ್‍ಎಸ್‍ಎಲ್‍ಸಿಯಲ್ಲಿ ಹೆಚ್ಚು ಅಂಕಗಳಿಸಿದ ಸಾಂದೀಪನಿ ಆಂಗ್ಲ ಮಾಧ್ಯಮ ಶಾಲೆಯ ಗಾನ, ಒಎಲ್‍ವಿ ಶಾಲೆಯ ಶ್ರಾವಣಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ಸಂತ ಜೋಸೆಫರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸಿಂಚನ ಹಾಗೂ ನಿಶಾ ಅವರುಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಸಂಸ್ಥೆಯ ಅಧ್ಯಕ್ಷ ಎಂ.ಡಿ. ಲಿಖಿತ್ ವಹಿಸಿದ್ದರು. ವೇದಿಕೆಯಲ್ಲಿ ಸಹಾಯಕ ರಾಜ್ಯಪಾಲ ಪಿ.ಕೆ. ರವಿ, ಕಾರ್ಯದರ್ಶಿ ಜೀವನ್‍ಕುಮಾರ್ ಉಪಸ್ಥಿತರಿದ್ದರು.