ನಾಪೆÇೀಕ್ಲು, ಅ. 1: ನಾಪೆÇೀಕ್ಲು ಸಮುದಾಯ ಆರೋಗ್ಯ ಕೇಂದ್ರದ ಪ್ರಯೋಗಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಕಳೆದ ಮೂರು ತಿಂಗಳುಗಳಿಂದ ವೇತನವಿಲ್ಲದೆ ಪರದಾಡುವಂತಾಗಿದೆ. ಗುತ್ತಿಗೆದಾರರನ್ನು ಸಂಪರ್ಕಿಸಿ ಸಂಬಳ ಕೇಳಿದರೆ ಕೆಲಸದಿಂದ ತೆಗೆದು ಹಾಕುವದಾಗಿ ಬೆದರಿಕೆ ಹಾಕುತ್ತಿದ್ದಾರೆ.
ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ದೂರು ನೀಡಿದರೆ ಪರಿಣಾಮ ನೆಟ್ಟಗಿರುವದಿಲ್ಲ ಎಂದು ಹೆದರಿಸುತ್ತಿದ್ದಾರೆ ಎಂದು ಸಮುದಾಯ ಆರೋಗ್ಯ ಕೇಂದ್ರದ ರಕ್ಷಾ ಸಮಿತಿ ಸದಸ್ಯ ಮನ್ಸೂರ್ ಅಲಿ ಅವರಿಗೆ ಸಿಬ್ಬಂದಿ ದೂರು ನೀಡಿದ್ದಾರೆ. ಕೋವಿಡ್ 19 ಕಾರಣದಿಂದ ಸಿಬ್ಬಂದಿಗೆ ಕೆಲಸದ ಒತ್ತಡ ಹೆಚ್ಚಿದೆ. ಅದರೊಂದಿಗೆ ಭಯದ ವಾತಾವರಣವೂ ಇದೆ. ಆದುದರಿಂದ ಜಿಲ್ಲಾ ಆರೋಗ್ಯಾಧಿಕಾರಿಗಳು ಇವರಿಗೆ ವೇತನ ನೀಡಲು ಕ್ರಮಕೈಗೊಳ್ಳಬೇಕು ಎಂದು ಮನ್ಸೂರ್ ಅಲಿ ಒತ್ತಾಯಿಸಿದ್ದಾರೆ.