ಮಡಿಕೇರಿ, ಅ. 1: ತಾ. 4 ರಂದು ನಡೆಯಬೇಕಿದ್ದ ವಿದ್ಯಾ ಇಲಾಖಾ ನೌಕರರ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯನ್ನು ಕಾರಣಾಂತರಗಳಿಂದ ತಾ. 11ಕ್ಕೆ ಮುಂದೂಡಲಾಗಿದೆ. ಈ ಹಿಂದೆ ನಿಗದಿಪಡಿಸಿದ್ದ ಸ್ಥಳವಾದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸಭಾಂಗಣ (ಸರಕಾರಿ ಪದವಿ ಪೂರ್ವ ಕಾಲೇಜು ಆವರಣ) ಮಡಿಕೇರಿಯಲ್ಲಿ ಸಭೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.