ಗುಡ್ಡೆಹೊಸೂರು, ಅ. 2: ಸಮೀಪದ ಬೊಳ್ಳೂರು ಊರುಡುವೆ ಪೈಸಾರಿಯ ದಿವ್ಯಾ ಎಂಬವರ ಪುತ್ರಿ ಅನುಷಾ ಎಂಬಾಕೆ ತಾ. 30ರಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸುವ ಮೂಲಕ ಸಾವಿಗೆ ನಿಖರ ಕಾರಣವನ್ನು ಪತ್ತೆ ಹಚ್ಚುವಂತೆ ಇಲ್ಲಿನ ಶ್ರೀ ಮುನೇಶ್ವರ ದೇವಾಲಯ ಸಮಿತಿಯವರು ಹಾಗೂ ಗ್ರಾಮಸ್ಥರು ಕುಶಾಲನಗರ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ. ಒಂದು ವರ್ಷದ ಹಿಂದೆ ಈಕೆಯ ತಂದೆ ಕೂಡ ಆತ್ಮಹತ್ಯೆಗೆ ಶರಣಾಗಿದ್ದು, ಇದೀಗ ಪುತ್ರಿಯೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ತನಿಖೆ ನಡೆಸುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ.