ಕುಶಾಲನಗರ, ಅ. 2: ಚೀನಾ ದೇಶದ ವಸ್ತುಗಳನ್ನು ಸುಟ್ಟು ಹಾಕುವ ಮೂಲಕ ಬೈಲುಕುಪ್ಪೆಯಲ್ಲಿ ನ್ಯಾಷನಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಟಿಬೆಟ್ ಸಂಘಟನೆಯಿಂದ ಪ್ರತಿಭಟನೆ ನಡೆಯಿತು. ಬೈಲುಕುಪ್ಪೆ 1ನೇ ಕ್ಯಾಂಪಿನ ಮಾರುಕಟ್ಟೆ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಂಘಟನೆ ಕಾರ್ಯಕರ್ತರು ಚೀನಾ ವಸ್ತುಗಳನ್ನು ಪ್ರತಿಯೊಬ್ಬರೂ ಬಹಿಷ್ಕರಿಸುವಂತೆ ಆಗ್ರಹಿಸಿದರು. ಸಂಘಟನೆಯ ಪ್ರಮುಖ ಸೋನಂ ತೆನ್ಸಿಂಗ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾರತ ಮತ್ತು ಚೀನಾ ಗಡಿಭಾಗದಲ್ಲಿ ಚೀನಾ ಸೈನಿಕರ ಉಪಟಳ ಹಾಗೂ ಇತ್ತೀಚಿನ ಬೆಳವಣಿಗೆ ಬಗ್ಗೆ ಖಂಡನೆ ವ್ಯಕ್ತಪಡಿಸಿದ ಸಂಘಟನೆ ಕಾರ್ಯಕರ್ತರು ಚೀನಾದಲ್ಲಿ 2022ರಲ್ಲಿ ನಡೆಯುವ ಒಲಂಪಿಕ್ಸ್ ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.