ಕೂಡಿಗೆ, ಅ. 2: ಕುಶಾಲನಗರ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ಮತ್ತು ಇಂಜಿನಿಯರ್ ದಿನಾಚರಣೆ ಅಂಗವಾಗಿ ಶಿಕ್ಷಕರನ್ನು ಸನ್ಮಾನಿಸುವ ಕಾರ್ಯಕ್ರಮ ಕುಶಾಲನಗರ ಸಮೀಪದ ವೀರಭೂವಿ ಪ್ರವಾಸಿ ಗ್ರಾಮದ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಕುಶಾಲನಗರ ಲಯನ್ಸ್ ಕ್ಲಬ್ ಅಧ್ಯಕ್ಷ ಸತೀಶ್‍ಕುಮಾರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಲಯ ಅಧ್ಯಕ್ಷ ಶಶಿಕುಮಾರ್, ಮಾಜಿ ಅಧ್ಯಕ್ಷ ಹರ್ಷ, ಕಾರ್ಯದರ್ಶಿ ಸುನಿಲ್, ಖಜಾಂಚಿ ಸುಮನ್ ಬಾಲಚಂದ್ರ ಉಪಸ್ಥಿತರಿದ್ದರು. ಈ ಸಂದರ್ಭ ಕೂಡಿಗೆ ಡಯಟ್ ಉಪನ್ಯಾಸಕಿ ಬಿ.ಬಿ. ಸಾವಿತ್ರಿ ಮತ್ತು ಕೆಎಂಟಿ ಶಾಲೆ ಶಿಕ್ಷಕಿ ಸುಮತಿ ಅವರನ್ನು ಗೌರವಿಸಲಾಯಿತು. ಮಾಜಿ ಅಧ್ಯಕ್ಷ ಮೋಹನ್ ಇಂಜಿನಿಯರ್ ದಿನಾಚರಣೆ ಬಗ್ಗೆ ಮಾತನಾಡಿದರು. ಕಾರ್ಯಕ್ರಮದಲ್ಲಿ ಲಯನ್ಸ್‍ನ ಸದಸ್ಯರು ಮತ್ತು ಶಿಕ್ಷಕರು ಭಾಗವಹಿಸಿದ್ದರು.