ಮಡಿಕೇರಿ, ಅ. 2 : ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ತಾ. 3 ರಂದು (ಇಂದು) ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಇಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾ ವೈದ್ಯಕೀಯ ಆಸ್ಪತ್ರೆಯಲ್ಲಿ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯ ಬಾಹ್ಯ ಕೇಂದ್ರದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 11.30 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಡಿಕೇರಿ ಹಾಗೂ ಗೋಣಿಕೊಪ್ಪದ ದಸರಾ ಆಚರಣೆ ಪೂರ್ವ ಸಿದ್ಧತಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಮಧ್ಯಾಹ್ನ 12 ಗಂಟೆಗೆ ತಲಕಾವೇರಿಯಲ್ಲಿ ನಡೆಯುವ ತೀರ್ಥೋದ್ಭವ ಕುರಿತಂತೆ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಂತರ ಮಧ್ಯಾಹ್ನ 1 ಗಂಟೆಗೆ ಸ್ವಚ್ಚ ಭಾರತ್ ಅಭಿಯಾನದಡಿ ಖರೀದಿಸಲಾದ ಕಸ ವಿಲೇವಾರಿ ವಾಹನಗಳ ಲೋಕಾರ್ಪಣೆ ಕಾರ್ಯಕ್ರಮ. ಬಳಿಕ ಮಧ್ಯಾಹ್ನ 3 ಗಂಟೆಗೆ ಕೊಳಕೇರಿ ಗ್ರಾಮದ ಮೋಟೇರಿ ಶ್ರೀ ಭಗವತಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಎಸ್.ಬಿ.ನರೇಂದ್ರ ತಿಳಿಸಿದ್ದಾರೆ.