ಕುಶಾಲನಗರ, ಅ. 2: ರಾಜ್ಯದಲ್ಲಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮಾಜದ ಸದಸ್ಯರಿಗೆ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಸ್ವಯಂ ಉದ್ಯೋಗ ಮತ್ತು ಮೂಲ ಸೌಕರ್ಯಗಳನ್ನು ಒದಗಿಸಿ ಜೀವನ ಮಟ್ಟವನ್ನು ಉನ್ನತೀಕರಿಸಲು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಕಟ್ಟಿ ಬದ್ಧವಾಗಿದೆ ಎಂದು ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ನಿರ್ದೇಶಕ ಕೆ.ಎನ್. ಛಾಯಪತಿ ಹೇಳಿದರು.

ಕುಶಾಲನಗರ ಬ್ರಾಹ್ಮಣ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ನಡೆದ ಸಮಾಜದ ಸಾಮೂಹಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿ, ಸಮುದಾಯದ ಬಗ್ಗೆ ರಾಜ್ಯಾದ್ಯಂತ ಸರ್ವೆ ಕಾರ್ಯಕೈಗೊಂಡು ಅಂತ್ಯಕಾಲ ದಲ್ಲಿರುವ ಮತ್ತು ದೀರ್ಘಕಾಲಿಕ ರೋಗಿಗಳಾಗಿರುವರಿಗೆ ವೈದ್ಯಕೀಯ ಧನ ಸಹಾಯ ಮತ್ತು ಅಪರ ಕರ್ಮಗಳನ್ನು ನಡೆಸಲು ಕಡಿಮೆ ವೆಚ್ಚದಲ್ಲಿ ವ್ಯವಸ್ಥೆ ಕಲ್ಪಿಸುವ ಉದ್ದೇಶವನ್ನು ಮಂಡಳಿ ಹೊಂದಿದೆ ಎಂದರು.

ಅತಿಥಿಯಾಗಿ ಪಾಲ್ಗೊಂಡಿದ್ದ ಮಂಡಳಿಯ ನಿರ್ದೇಶಕರಾದ ವೇದಬ್ರಹ್ಮ ಡಾ.ಭಾನುಪ್ರಕಾಶ್ ಶರ್ಮ ಮಾತನಾಡಿ, ಪ್ರತಿಯೊಬ್ಬರೂ ಸದಾ ಸಮಾಜ ಮುಖಿಯಾಗಿ ಕಾರ್ಯೋನ್ಮುಖರಾಗಬೇಕೆಂದು ಸಲಹೆ ನೀಡಿದರು.

ಕುಶಾಲನಗರ ಬ್ರಾಹ್ಮಣ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ವಿಜೇಂದ್ರ ಅಧ್ಯಕ್ಷತೆ ವಹಿಸಿದ್ದರು.

ಕೊಡಗು ಜಿಲ್ಲಾ ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ ಅಧ್ಯಕ್ಷ, ಗೋಪಾಲಕೃಷ್ಣ, ಪದಾಧಿಕಾರಿ ಮುಳಿಯ ಕೇಶವಭಟ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.

ಬ್ರಾಹ್ಮಣ ಕ್ಷೇಮಾಭಿವೃದ್ಧಿ ಸಮಿತಿಯ ಎಂ.ಗಿರೀಶ್, ಜಿ.ಶರತ್, ಮಂಜುನಾಥ್ ಗುಂಡೂರಾವ್, ಎಂ.ವಿ.ನಾರಾಯಣ್, ಸೋಮವಾರಪೇಟೆ ಬ್ರಾಹ್ಮಣ ಸಮಾಜದ ಅಧ್ಯಕ್ಷ ಎಸ್. ಆರ್. ಶ್ರೀನಿವಾಸ್, ಕಾರ್ಯದರ್ಶಿ ಎಸ್. ಡಿ.ವಿಜೇತ್, ಎಸ್. ಆರ್. ಸೋಮೇಶ್, ಜಿಲ್ಲೆಯ ವಿಪ್ರ ಬಾಂಧವರು ಉಪಸ್ಥಿತರಿದ್ದರು.

ಕೆ.ಎಸ್.ರಾಜಶೇಖರ್ ಕಾರ್ಯಕ್ರಮ ನಿರ್ವಹಿಸಿ, ವೇದ ವಿದ್ವಾನ್ ಸುಬ್ಬರಾಂ ವಂದಿಸಿದರು.