ಮಡಿಕೇರಿ, ಅ. 2: ಮಡಿಕೇರಿ ನಗರದ ಕಸವಿಲೇವಾರಿ ಸಮಸ್ಯೆಗೆ ಸಂಬಂಧಿಸಿದಂತೆ ಮಡಿಕೇರಿ ನಗರಸಭೆ ತಾ. 15ರೊಳಗೆ ಅಫಿಡವಿಟ್ ಸಲ್ಲಿಸಲು ಅಂತಿಮ ಅವಕಾಶ ನೀಡಿದೆ.

ನಿನ್ನೆ ರಾಜ್ಯ ಉಚ್ಚ ನ್ಯಾಯಾಲಯ ದಲ್ಲಿ ಈ ಕುರಿತು ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆದಿದ್ದು, ನ್ಯಾಯಾಲಯ ಈ ನಿರ್ದೇಶನ ನೀಡಿದೆ.ಕಸವಿಲೇವಾರಿ ಸ್ಥಳವನ್ನು ಸ್ಥಳಾಂತರಿಸುವ ಕುರಿತಾಗಿ ಈ ಅಫಿಡವಿಟ್ ಸಲ್ಲಿಸಲು ಸೂಚಿಸಲಾಗಿದೆ. ಈ ಸಂದರ್ಭ ನ್ಯಾಯಾಲಯಕ್ಕೆ ಉತ್ತರಿಸಿದ ಸಿಎಂಸಿ ಪರ ವಕೀಲರು ಈ ವಿಚಾರಕ್ಕೆ ಸಂಬಂಧಿಸಿದಂತೆ ನಗರಸಭೆ ಮೂಲಕ ರಾಜ್ಯ ಸರಕಾರಕ್ಕೆ ಪರ್ಯಾಯ ಜಾಗ ಮಡಿಕೇರಿ, ಅ. 2: ಮಡಿಕೇರಿ ನಗರದ ಕಸವಿಲೇವಾರಿ ಸಮಸ್ಯೆಗೆ ಸಂಬಂಧಿಸಿದಂತೆ ಮಡಿಕೇರಿ ನಗರಸಭೆ ತಾ. 15ರೊಳಗೆ ಅಫಿಡವಿಟ್ ಸಲ್ಲಿಸಲು ಅಂತಿಮ ಅವಕಾಶ ನೀಡಿದೆ.ನಿನ್ನೆ ರಾಜ್ಯ ಉಚ್ಚ ನ್ಯಾಯಾಲಯ ದಲ್ಲಿ ಈ ಕುರಿತು ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆದಿದ್ದು, ನ್ಯಾಯಾಲಯ ಈ ನಿರ್ದೇಶನ ನೀಡಿದೆ.

ಕಸವಿಲೇವಾರಿ ಸ್ಥಳವನ್ನು ಸ್ಥಳಾಂತರಿಸುವ ಕುರಿತಾಗಿ ಈ ಅಫಿಡವಿಟ್ ಸಲ್ಲಿಸಲು ಸೂಚಿಸಲಾಗಿದೆ. ಈ ಸಂದರ್ಭ ನ್ಯಾಯಾಲಯಕ್ಕೆ ಉತ್ತರಿಸಿದ ಸಿಎಂಸಿ ಪರ ವಕೀಲರು ಈ ವಿಚಾರಕ್ಕೆ ಸಂಬಂಧಿಸಿದಂತೆ ನಗರಸಭೆ ಮೂಲಕ ರಾಜ್ಯ ಸರಕಾರಕ್ಕೆ ಪರ್ಯಾಯ ಜಾಗ ವಿಷಯ ಪ್ರಸ್ತಾಪಗೊಂಡಿದ್ದು, ಇದಕ್ಕೆ ನೀಡಿರುವ ಮಾಹಿತಿ ತಪ್ಪಾಗಿರುವ ಕುರಿತು ಅರ್ಜಿದಾರರ ಪರ ವಕೀಲರು ನ್ಯಾಯಾಲಯದ ಗಮನಕ್ಕೆ ತಂದರು. ಈ ಸಂದರ್ಭ ನಗರಸಭೆಯ ಪರ ವಕೀಲರು ಸದನದ ವಿಚಾರ ಇಲ್ಲಿ ಚರ್ಚೆಗೆ ಅವಕಾಶವಿಲ್ಲದಿರುವುದಾಗಿ ಹೇಳಿದರೆನ್ನಲಾಗಿದೆ.

ಈ ಸಂದರ್ಭ ಕಸ ವಿಲೇವಾರಿಯ ಕುರಿತಾಗಿ ರಾಜ್ಯ ಸರಕಾರ ಕೈಗೊಂಡಿರುವ ಕ್ರಮ ಹಾಗೂ ಅಧಿಕಾರಿಗಳ ವಿರುದ್ಧ ಕ್ರಮದ ಕುರಿತಾಗಿ ನ್ಯಾಯಾಲಯಕ್ಕೆ ಪ್ರತ್ಯೇಕ ಅಫಿಡವಿಟ್ ಸಲ್ಲಿಸುವಂತೆಯೂ ಸೂಚನೆಯನ್ನು ನೀಡಿ ವಿಚಾರಣೆಯನ್ನು ಮುಂದೂಡಿದೆ. ಅರ್ಜಿದಾರರ ಪರ ವಕೀಲೆ ಅನು ಚಂಗಪ್ಪ ವಾದ ಮಂಡಿಸುತ್ತಿದ್ದಾರೆ.