ಕೂಡಿಗೆ, ಅ. 3: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಮತ್ತು ಕಾಳಿದೇವನ ಹೊಸೂರು ಗ್ರಾಮದಲ್ಲಿ ಬಹುದಿನಗಳ ಬೇಡಿಕೆಯಾಗಿದ್ದ ಕುಡಿಯುವ ನೀರಿನ ಸರಬರಾಜು ಯೋಜನೆಯ ಕಾಮಗಾರಿ ಆರಂಭವಾಗಿದೆ. ಜಿಲ್ಲಾ ಪಂಚಾಯಿತಿ ಗ್ರಾಮೀಣ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಆರ್. ಮಂಜುಳಾ ಅನುದಾನದಲ್ಲಿ ರೂ. 6 ಲಕ್ಷ ವೆಚ್ಚದಲ್ಲಿ ಕಾಮಗಾರಿ ನಡೆಯಲಿದೆ.