ಮಡಿಕೇರಿ, ಅ. 3: ಭಾರತೀಯ ಜನತಾ ಪಾರ್ಟಿ ಮಡಿಕೇರಿ ನಗರ ಘಟಕದ ವತಿಯಿಂದ ಡ್ರಗ್ಸ್ ಮುಕ್ತ ಕರ್ನಾಟಕ ಕಾರ್ಯಕ್ರಮ ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರ ಅಧ್ಯಕ್ಷ ಮನು ಮಂಜುನಾಥ್ ವಹಿಸಿದ್ದರು. ಸಭೆಯನ್ನು ಉದ್ದೇಶಿಸಿ ಜಿಲ್ಲಾ ಅಧ್ಯಕ್ಷ ರಾಬಿನ್ ದೇವಯ್ಯ, ವಿಧಾನಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ ಮಾತನಾಡಿದರು. ಸಭೆಯಲ್ಲಿ ಜಿಲ್ಲಾ ವಕ್ತಾರ ಮಹೇಶ್ ಜೈನಿ, ಉಪಾಧ್ಯಕ್ಷ ಅರುಣ್ ಕುಮಾರ್, ಕಾರ್ಯದರ್ಶಿ ಸತೀಶ್, ಕಾರ್ಯಕ್ರಮದ ಸಂಯೋಜಕ ಬಿ.ಕೆ. ಜಗದೀಶ್, ಸಹ ಸಂಯೋಜಕ ಡಿಶು, ಪ್ರಧಾನ ಕಾರ್ಯದರ್ಶಿಗಳಾದ ಅಪ್ಪಣ್ಣ, ಉಮೇಶ್ ಸುಬ್ರಮಣಿ, ಬಿ.ಎಂ. ರಾಜೇಶ್, ಜೀವನ್, ಕುಶ, ಖಜಾಂಚಿ ಮುರುಗನ್, ಯುವ ಮೋರ್ಚಾ ಅಧ್ಯಕ್ಷ ನವೀನ್ ಪೂಜಾರಿ, ಟಿ.ಎಸ್, ಪ್ರಕಾಶ್, ಕೆ.ಎಸ್. ರಮೇಶ್, ಉಣ್ಣಿ ಕೃಷ್ಣ ಹಾಗೂ ಇತರರು ಉಪಸ್ಥಿತರಿದ್ದರು.