ನಾಪೆÇೀಕ್ಲು, ಅ. 3: ಸಮೀಪದ ಮೂಟೇರಿ ಶ್ರೀ ಉಮಾಮಹೇಶ್ವರಿ ದೇವಳದ ಜೀರ್ಣೋದ್ಧಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು 50 ಲಕ್ಷ ರೂ.ಗಳನ್ನು ವೈಯಕ್ತಿಕವಾಗಿ ಕೊಡುಗೆ ನೀಡುವುದಾಗಿ ಘೋಷಿಸಿದರು.
ದೇವಳಕ್ಕೆ ಭೇಟಿ ನೀಡಿದ ಅವರು ಪೂಜೆ ಸಲ್ಲಿಸಿದ ಸಂದರ್ಭದಲ್ಲಿ ಗ್ರಾಮಸ್ಥರು ದೇವಳದ ಜೀರ್ಣೋದ್ಧಾರಕ್ಕೆ ಸರಕಾರದಿಂದ ಅನುದಾನ ನೀಡುವಂತೆ ಬೇಡಿಕೆ ಸಲ್ಲಿಸಿದರು. ಕೂಡಲೇ ಅವರು ಈ ದೇವಳಕ್ಕೆ ಹೆಚ್ಚು ಶಕ್ತಿ ಇದ್ದು, ತನ್ನ ಸ್ವಂತ ಹಣ ನೀಡುತ್ತೇನೆ ಎಂದು ಹೇಳಿದರು. ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ಸರಕಾರದಿಂದಲೂ ಅನುದಾನ ಕೊಡಿಸುವದಾಗಿ ಭರವಸೆ ನೀಡಿದರು. 50 ಲಕ್ಷ ರೂ.ಗಳಲ್ಲಿ ಕೂಡಲೇ 10 ಲಕ್ಷ ನೀಡುತ್ತೇನೆ. ಕಾಮಗಾರಿ ಆರಂಭಿಸಿ ಎಂದರಲ್ಲದೆ ಉಳಿದ ಹಣವನ್ನು ಹಂತ ಹಂತವಾಗಿ ನೀಡುತ್ತೇನೆ ಎಂದರು.
ಉಸ್ತುವಾರಿ ಸಚಿವ ವಿ. ಸೋಮಣ್ಣ, ಶಾಸಕ ಕೆ.ಜಿ. ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್ ಖಂದು, ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಭಂವರ್ ಸಿಂಗ್ ಮೀನಾ ಅವರನ್ನು ದೇವಳ ಆಡಳಿತ ಮಂಡಳಿ ಮತ್ತು ಗ್ರಾಮಸ್ಥರ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭ ದೇವಳ ಆಡಳಿತ ಮಂಡಳಿ ಅಧ್ಯಕ್ಷ ಅಪ್ಪಚ್ಚಿರ ರೆಮ್ಮಿ ನಾಣಯ್ಯ, ಭಾಗಮಂಡಲ-ತಲಕಾವೇರಿ ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿದ್ದಾಟಂಡ ಎಸ್. ತಮ್ಮಯ್ಯ, ಜಿ.ಪಂ. ಸದಸ್ಯ ಪಾಡಿಯಮ್ಮಂಡ ಮುರಳಿ ಕರುಂಬಮ್ಮಯ್ಯ, ಗ್ರಾಮಸ್ಥರು, ಸ್ಥಳೀಯ ಬಿಜೆಪಿ ಮುಖಂಡರು, ಕಂದಾಯ ಇಲಾಖಾಧಿಕಾರಿಗಳು, ಪೆÇಲೀಸ್ ಸಿಬ್ಬಂದಿ ಇದ್ದರು.