ಮಡಿಕೇರಿ, ಅ. 5: ಮಡಿಕೇರಿ ನಗರ ಬಿಜೆಪಿ ಕಾರ್ಯಕಾರಿಣಿ ಸಭೆ ಇಂದು ನಗರದ ಹೋಟೆಲ್ ರಾಜ್ ದರ್ಶನ್ ಸಭಾಂಗಣದಲ್ಲಿ ನಗರ ಅಧ್ಯಕ್ಷ ಮನು ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಜಿಲ್ಲಾ ಅಧ್ಯಕ್ಷ ರಾಬಿನ್ ದೇವಯ್ಯ, ರಾಜ್ಯ ಉಪಾಧ್ಯಕ್ಷ ಮತ್ತು ಪಕ್ಷದ ಕೊಡಗು ಉಸ್ತುವಾರಿ ರಾಜೇಂದ್ರ, ಎಂಎಲ್ಸಿ ಸುನಿಲ್ ಸುಬ್ರಮಣಿ, ಪಕ್ಷದ ಪ್ರಬಾರಿ ಉದಯ್ ಕುಮಾರ್ ಶೆಟ್ಟಿ, ಗೋಪಾಲಕೃಷ್ಣ ಹೇರಳೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾಳಪ್ಪ ಅವರು ಭಾಗವಹಿಸಿ ಪಕ್ಷ ಸಂಘಟನೆ ಬಗ್ಗೆ ಮಾರ್ಗದರ್ಶನ ಮಾಡಿದರು. ನಗರ ಕಾರ್ಯದರ್ಶಿ ಉಮೇಶ್ ಸುಬ್ರಮಣಿ ಸ್ವಾಗತಿಸಿದರು. ಮತೊಬ್ಬ ಪ್ರಧಾನ ಕಾರ್ಯದರ್ಶಿ ಅಪ್ಪಣ್ಣ ಕಾರ್ಯಕ್ರಮ ನಿರೂಪಿಸಿ, ಮಹಿಳಾ ಮೋರ್ಚಾ ಅಧ್ಯಕ್ಷೆ ಸವಿತಾ ರಾಖೇಶ್ ವಂದಿಸಿದರು.