*ಕೊಡ್ಲಿಪೇಟೆ, ಅ. 4: ರಾಜ್ಯ ಸರ್ಕಾರದ ಸ್ವಚ್ಚ ಬಾರತ್ ಮಿಷನ್ ಯೋಜನೆಯಡಿ ಸಮೀಪದ ಬ್ಯಾಡಗೊಟ್ಟ ಗ್ರಾಮ ಪಂಚಾಯತಿಯಲ್ಲಿ ಸ್ವಚ್ಛೋತ್ಸವ-ನಿತ್ಯೋತ್ಸವ ವಿಶೇಷ ಗ್ರಾಮ ಸಭೆ ನಡೆಯಿತು.
ಪಂಚಾಯಿತಿ ಆಡಳಿತಾಧಿಕಾರಿ ಲಿಂಗರಾಜಪ್ಪ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮ ಸಭೆಯಲ್ಲಿ, ಸ್ವಚ್ಛೋತ್ಸವ ನಿತ್ಯೋತ್ಸವ ಕಾರ್ಯಕ್ರಮದ ಮೂಲಕ ನಿರಂತರವಾಗಿ ಸ್ವಚ್ಛತೆಯನ್ನು ಕಾಯ್ದುಕೊಳ್ಳುವುದು, ಸ್ವಚ್ಛತೆ ಹಾಗೂ ಶ್ರಮದಾನ ಮತ್ತು ಘನ ತ್ಯಾಜ್ಯ ನಿರ್ವಹಣೆಯ ಬಗ್ಗೆ ಸಭೆಯಲ್ಲಿ ಜಾಗೃತಿ ಮೂಡಿಸಲಾಯಿತು.
ಸಭೆಯಲ್ಲಿ ಮಹಾತ್ಮಾಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಳ್ಳಬೇಕಾದ ಕಾಮಗಾರಿಗಳ ಪಟ್ಟಿಯನ್ನು ಮಾಡಲಾಯಿತು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹರೀಶ್ ಸಭೆಯ ಉದ್ದೇಶ, ನಿತ್ಯೋತ್ಸವ ಯೋಜನೆಯ ಬಗ್ಗೆ ಮಾಹಿತಿ ಒದಗಿಸಿದರು. ಗ್ರಾ.ಪಂ. ಕಾರ್ಯದರ್ಶಿ ದೇವರಾಜ್, ಸಿಬ್ಬಂದಿಗಳಾದ ರಾಜೇಶ್, ಸಚಿನ್, ರಂಜಿತಾ ಸೇರಿದಂತೆ ಬ್ಯಾಡಗೊಟ್ಟ, ಬೆಂಬಳೂರು, ಕ್ಯಾತೆ ಗ್ರಾಮಗಳ ಸಾರ್ವಜನಿಕರು ಸಭೆಯಲ್ಲಿ ಉಪಸ್ಥಿತರಿದ್ದರು.