ಸೋಮವಾರಪೇಟೆ, ಅ. 4: ಜಿ.ಪಂ., ಸಾರ್ವಜನಿಕ ಶಿಕ್ಷಣ ಇಲಾಖೆ, ಶಿಕ್ಷಕರ ಕಲ್ಯಾಣ ನಿಧಿ ಮತ್ತು ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ ಹಾಗೂ ಶಿಕ್ಷಕರ ದಿನಾಚರಣಾ ಸಮಿತಿ ವತಿಯಿಂದ ತಾ. 5 ರಂದು (ಇಂದು) ಸ್ಥಳೀಯ ಒಕ್ಕಲಿಗರ ಸಮುದಾಯ ಭವನದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

ಬೆಳಿಗ್ಗೆ 10 ಗಂಟೆಗೆ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಅಪ್ಪಚ್ಚು ರಂಜನ್ ವಹಿಸಲಿದ್ದು, ತಾ.ಪಂ. ಅಧ್ಯಕ್ಷೆ ಪುಷ್ಪಾ ರಾಜೇಶ್ ಉದ್ಘಾಟಿಸಲಿದ್ದಾರೆ. ಜಿ.ಪಂ. ಅಧ್ಯಕ್ಷ ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಎಂಎಲ್‍ಸಿಗಳಾದ ವೀಣಾ ಅಚ್ಚಯ್ಯ, ಸುನಿಲ್ ಸುಬ್ರಮಣಿ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ.