ಶನಿವಾರಸಂತೆ, ಅ. 4: ಅಂಕನಹಳ್ಳಿ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯುತ್ತಿರುವ ವಿದ್ಯಾಗಮಿ ವಿದ್ಯಾರ್ಥಿಗಳಿಗೆ ಜಿಲ್ಲಾ ಮಕ್ಕಳ ಸಹಾಯವಾಣಿ ಕೇಂದ್ರ ಮತ್ತು ಕಾರ್ಡ್ ಸಂಸ್ಥೆ ವತಿಯಿಂದ ಕೋವಿಡ್-19 ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕುಶಾಲನಗರದ ಜಿಲ್ಲಾ ಮಕ್ಕಳ ಸಹಾಯವಾಣಿ ಕೇಂದ್ರದ ತಾಲೂಕು ಕಾರ್ಯಕರ್ತೆ ಬಿ.ಆರ್. ಕುಮಾರಿ ಸಲಹೆ ನೀಡಿದರು. ಶಾಲಾ ಮುಖ್ಯ ಶಿಕ್ಷಕ ಜಿ.ಎಂ. ಹೇಮಂತ್ ಬಾಲ್ಯ ವಿವಾಹ ಕಾಯಿದೆ ಕುರಿತು ಮಾಹಿತಿ ನೀಡಿದರು. ಮಾಹಿತಿ ಕಾರ್ಯಕ್ರಮದಲ್ಲಿ ಚೈಲ್ಡ್ಲೈನ್ ಸಂಸ್ಥೆಯ ತಾಲೂಕು ಕಾರ್ಯಕರ್ತ ಯೋಗೇಶ್ ಹಾಗೂ ಶಾಲಾ ಶಿಕ್ಷಕರು ಇದ್ದರು. ಈ ಸಂದರ್ಭ ಚೈಲ್ಡ್ಲೈನ್ ಸಂಸ್ಥೆಯಿಂದ ವಿದ್ಯಾರ್ಥಿ ಗಳಿಗೆ ಮಾಸ್ಕ್ ವಿತರಣೆ ಮಾಡಲಾಯಿತು.