*ಕೊಡ್ಲಿಪೇಟೆ, ಅ. 4: ಕೊಡ್ಲಿಪೇಟೆ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಜಾನಕಮ್ಮ ಅವರನ್ನು ಶಾಲೆಯ ಪರವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು.ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ್, ಗೌಡಳ್ಳಿ ಕ್ಲಸ್ಟರ್‍ನ ಸಿ.ಆರ್.ಪಿ. ಮನೋಹರ್, ಪದವಿ ಪೂರ್ವ ಕಾಲೇಜಿನ ಮುಖ್ಯ ಶಿಕ್ಷಕ ಅಬ್ದುಲ್ ರಬ್, ಬೆಸೂರು ಪ್ರೌಢಶಾಲೆಯ ಮುಖ್ಯ ಶಿಕ್ಷಕ ರಾಘವೇಂದ್ರ, ದೊಡ್ಡಕೊಡ್ಲಿ ಶಾಲಾ ಶಿಕ್ಷಕ ಮೊಹಮ್ಮದ್ ಫಯಾಜ್, ಪ್ರೌಢಶಾಲೆಯ ಶಿಕ್ಷಕರು ಹಾಗು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.