ಮಡಿಕೇರಿ, ಅ. 5: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಒಂದು ಸಾವು ವರದಿಯಾಗಿದೆ. ಸುಂಟಿಕೊಪ್ಪ ಗದ್ದೆಹಳ್ಳದ ನಿವಾಸಿ 67 ವರ್ಷದ ಪುರುಷರೊಬ್ಬರು ಮೃತರಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 49 ಕ್ಕೇರಿದೆ.

ಜಿಲ್ಲೆಯಲ್ಲಿ ಹೊಸದಾಗಿ 48 ಕೊರೊನಾ ಪ್ರಕರಣಗಳು ವರದಿಯಾಗಿವೆ. ಇದುವರೆಗೆ 3163 ಪ್ರಕರಣಗಳು ವರದಿಯಾಗಿದ್ದು, 2600 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 48 ಮಂದಿ ಸಾವನ್ನಪ್ಪಿದ್ದು 514 ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ 111 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, 77 ಮಂದಿ ಕೋವಿಡ್ ಕೇರ್ ಸೆಂಟರ್‍ನಲ್ಲಿ, 326 ಮಂದಿ ಹೋಮ್ ಐಸೋಲೇಷನ್‍ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ 475 ನಿಯಂತ್ರಿತ ವಲಯಗಳಿವೆ.