ಮಡಿಕೇರಿ, ಅ.6: ಸುಂಟಿಕೊಪ್ಪ, ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಮಾದಾಪುರ ಫಿüೀಡರ್‍ನಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿದ್ದು, ತಾ. 7 ರಂದು (ಇಂದು) ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸ ಲಾಗುವುದು. ಮಾದಾಪುರ, ಹಟ್ಟಿಹೊಳೆ, ಕಾಂಡನಕೊಲ್ಲಿ, ಗರ್ವಾಲೆ, ಬಿಳಿಗೇರಿ, ಸುಂಟಿಕೊಪ್ಪ ಹಾಗೂ ಸುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಹಾಗೆಯೇ ಕುಶಾಲನಗರ, ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಕಾವೇರಿ ಫಿüೀಡರ್‍ನಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದ ರಿಂದ ತಾ. 7 ರಂದು (ಇಂದು) ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಉಪಕೇಂದ್ರ ಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸ ಲಾಗುವುದು. ಮುಳ್ಳುಸೋಗೆ, ಗೊಂದಿ ಬಸವನಹಳ್ಳಿ, ಗುಡ್ಡೆಹೊಸೂರು, ಮಾದಾಪಟ್ಟಣ ಹಾಗೂ ಸುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.