ಪೆÇನ್ನಂಪೇಟೆ, ಅ. 6: ಮಾಯಮುಡಿಯ ಐರನ್ ಸೈಟ್ ಶೂಟರ್ಸ್ ತಂಡದ ವತಿಯಿಂದ ಕೈಲ್ ಪೆÇಳ್ದ್ ಹಬ್ಬದ ಅಂಗವಾಗಿ ತೆಂಗಿನಕಾಯಿಗೆ ಗುಂಡು ಹೊಡೆಯುವ ಪ್ರಥಮ ವರ್ಷದ ಮುಕ್ತ ಸ್ಪರ್ಧೆಯನ್ನು ಆಯೋಜಿಸ ಲಾಗಿದೆ ಎಂದು ಸ್ಪರ್ಧೆಯ ಯೋಜನಾ ನಿರ್ದೇಶಕರೂ ಆಗಿರುವ ಮಾಯಮುಡಿಯ 'ಐರನ್ ಸೈಟ್ ಶೂಟರ್ಸ್' ಮುಖ್ಯಸ್ಥ ಆಪಟ್ಟೀರ ಆರ್. ಅಯ್ಯಪ್ಪ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾ. 11 ರಂದು ಆಯೋಜಿಸಲಾಗಿರುವ ಈ ಸ್ಪರ್ಧೆಯು ಗೋಣಿಕೊಪ್ಪಲು ಸಮೀಪದ ಮಾಯಮುಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಲಿದೆ.
ಈ ಶೂಟಿಂಗ್ ಸ್ಪರ್ಧೆಯಲ್ಲಿ 0.22 ರೈಫಲ್ನಲ್ಲಿ ಮಾತ್ರ ತೆಂಗಿನಕಾಯಿಗೆ ಗುಂಡು ಹೊಡೆಯುವ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.
ಅಂದು ಬೆಳಿಗ್ಗೆ 10 ಗಂಟೆಗೆ ಆರಂಭಗೊಳ್ಳಲಿರುವ ಸ್ಪರ್ಧೆಯನ್ನು ಹಾಕಿಪಟು, ಪದ್ಮಶ್ರೀ ಪುರಸ್ಕøತ ಎಂ.ಪಿ. ಗಣೇಶ್ ಅವರು ಉದ್ಘಾಟಿಸಲಿದ್ದಾರೆ.
ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾಯಮುಡಿ ಕೋಲ್ ಬಾಣೆ ಕಾವೇರಿ ಅಸೋಸಿಯೇಷನ್ ಅಧ್ಯಕ್ಷ ಕಾಳಪಂಡ ಸಿ. ಸುಧೀರ್, ವೀರಾಜಪೇಟೆ ಪೆÇಲೀಸ್ ಉಪ ವಿಭಾಗದ ಡಿವೈಎಸ್ಪಿ ಸಿ.ಟಿ. ಜಯಕುಮಾರ್, ಹಿರಿಯ ಕಾಫಿ ಬೆಳೆಗಾರರಾದ ಚೆಪ್ಪುಡಿರ ಕಿಟ್ಟು ಅಯ್ಯಪ್ಪ, ಮಹಿಳಾ ಸಾಧಕಿ ಚೆಪ್ಪುಡಿರ ರಾಧ ಅಚ್ಚಯ್ಯ ಅವರು ಪಾಲ್ಗೊಳ್ಳಲಿದ್ದಾರೆ.
ಎಂ.ಪಿ. ಗಣೇಶ್ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.
ಅದೇ ದಿನ ಮಧ್ಯಾಹ್ನ ನಡೆಯುವ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಗುವುದು.
ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಗೋಣಿಕೊಪ್ಪಲು ಎಪಿಎಂಸಿ ಮಾಜಿ ಅಧ್ಯಕ್ಷರು ಮತ್ತು ಹಿರಿಯ ಕಾಫಿ ಬೆಳೆಗಾರರಾದ ಕಾಳಪಂಡ ಟಿ. ಟಿಪ್ಪು ಬಿದ್ದಪ್ಪ, ಮುಂತಾದವರು ಭಾಗವಹಿಸಲಿದ್ದಾರೆ ಎಂದು ಅಯ್ಯಪ್ಪ ವಿವರಿಸಿದರು.
ಸ್ಪರ್ಧೆಯ ಪ್ರಥಮ ಸ್ಥಾನ ವಿಜೇತರಿಗೆ ದಿ.ಎಂ. ಡಬ್ಲ್ಯೂ. ಅಯ್ಯಪ್ಪ ಅವರ ಸ್ಮರಣಾರ್ಥ ಅವರ ಪುತ್ರ ಪ್ರಾಯೋಜಿಸಿರುವ ರೂ.10000 ನಗದು ಮತ್ತು ಆಕರ್ಷಕ ಟ್ರೋಫಿ, ದ್ವಿತೀಯ ಸ್ಥಾನ ವಿಜೇತರಿಗೆ ದಿ. ಕಾಳಪಂಡ ಸ್ವರಾಜ್ ಚಂಗಪ್ಪ ಅವರ ಸ್ಮರಣಾರ್ಥವಾಗಿ ಅವರ ಸಹೋದರ ಮತ್ತು ಸಹೋದರಿಯರು ಪ್ರಾಯೋಜಿಸಿರುವ ರೂ. 7000 ನಗದು ಬಹುಮಾನ ಮತ್ತು ಟ್ರೋಫಿ ಮತ್ತು ತೃತೀಯ ಸ್ಥಾನ ವಿಜೇತರಿಗೆ ಮಡಿಕೇರಿಯ ಬಿ. ಪ್ರಭಾಕರ ಭಂಡಾರಿ ಸಂಸ್ಥೆಯ ವತಿಯಿಂದ ಪ್ರಶಾಂತ್ ಭಂಡಾರಿ ಪ್ರಾಯೋಜಿಸಿರುವ ರೂ 5000 ನಗದು ಬಹುಮಾನ ಮತ್ತು ಟ್ರೋಫಿಯನ್ನು ನೀಡಲಾಗುವುದು ಎಂದು ಅವರು ಹೇಳಿದರು.
ಆಸಕ್ತರು ಯಾವುದೇ ವಯೋಮಿತಿಯ ನಿಬರ್ಂಧವಿಲ್ಲದೆ ಮುಕ್ತವಾಗಿ ಭಾಗವಹಿಸಬಹುದಾದ ಈ ಸ್ಪರ್ಧೆಯಲ್ಲಿ ಅಂದು ಬೆಳಿಗ್ಗೆ 10 ಗಂಟೆಯೊಳಗಾಗಿ ಸ್ಪರ್ಧಿಗಳು ತಮ್ಮ ಹೆಸರನ್ನು ನೋಂದಾಯಿಸಿ ಕೊಳ್ಳುವುದು ಕಡ್ಡಾಯ ವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆಗಳಾದ 9611870813, 9902612333 ಸಂಪರ್ಕಿಸ ಬಹುದಾಗಿದೆ ಎಂದು ತಿಳಿಸಿದ್ದಾರೆ.
ಗೋಷ್ಠಿಯಲ್ಲಿ ಉಪಸ್ಥಿತರಿದ್ದ ಸ್ಪರ್ಧೆಯ ಸಂಚಾಲಕರಾದ ಕಂಜಿತಂಡ ಡಬ್ಲ್ಯೂ. ಪೆÇನ್ನಪ್ಪ ಮಾತನಾಡಿ, ಈ ಸಂಸ್ಥೆ ವತಿಯಿಂದ ಮುಂದೆ ತೋಕ್ ನಮ್ಮೆ (ಬಂದೂಕು ಉತ್ಸವ) ಗಳನ್ನು ನಿರಂತರವಾಗಿ ಆಯೋಜಿಸುವ ಉದ್ದೇಶ ಹೊಂದಲಾಗಿದೆ ಎಂದು ಹೇಳಿದರು.
ಗೋಷ್ಠಿಯಲ್ಲಿ ಆಪಟ್ಟೀರ ಟಾಟು ಮೊಣ್ಣಪ್ಪ ಅವರು ಉಪಸ್ಥಿತರಿದ್ದರು.