ಸಿದ್ದಾಪುರ, ಅ. 6: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೋರ್ವರು ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ. ವೀರಾಜಪೇಟೆ ದೇವಾಂಗ ಬೀದಿ ನಿವಾಸಿ ಆಂಟೋನಿ ಎಂಬವರು ತಮ್ಮ ಮಗಳು ವಾಸ ಮಾಡಿಕೊಂಡಿರುವ ಇಂಜಿಲಗೆರೆ ಸಮೀಪದ ಆನಂದಪುರಕ್ಕೆ ಆಗಮಿಸಿ ನಂತರ ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದ ಕಾವೇರಿ ನದಿಗೆ ಬಂದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಿದ್ದಾಪುರ ಠಾಣಾಧಿಕಾರಿ ಮೋಹನ್‍ರಾಜ್ ಹಾಗೂ ಸಹಾಯಕ ಠಾಣಾಧಿಕಾರಿ ಗಣಪತಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಮೃತ ದೇಹವನ್ನು ಮೃತ ವ್ಯಕ್ತಿಯ ಕುಟುಂಬಕ್ಕೆ ಹಸ್ತಾಂತರಿಸಿದರು.