ಮಡಿಕೇರಿ, ಅ. 6: ಅಪ್ಪಂಗಳದ ಭಾರತೀಯ ಸಾಂಬಾರ ಬೆಳೆಗಳ ಸಂಶೋಧನಾ ಪ್ರಾದೇಶಿಕ ಕೇಂದ್ರದಲ್ಲಿ (ಐಐಎಸ್‍ಆರ್) 42 ವರ್ಷ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಕಚೇರಿ ಕೌಶಲ ಸಹಾಯಕ ಸಿಬ್ಬಂದಿ ಬಿ.ಎಸ್. ಶೇಷಪ್ಪ ಅವರಿಗೆ ಬೀಳ್ಕೊಡುಗೆ ನೀಡಲಾಯಿತು.
ಕೇಂದ್ರದ ಪ್ರಧಾನ ನಿರ್ದೇಶಕರಾದ ಡಾ. ಎಸ್.ಜೆ. ಅಂಕೆಗೌಡ ಅವರು ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದರು. ಈ ಸಂದರ್ಭ ಶೇಷಪ್ಪ ವೃತ್ತಿ ಜೀವನದ ಅನುಭವ ಹಂಚಿಕೊಂಡರು.