ಸೋಮವಾರಪೇಟೆ, ಅ. 6: ಕೊರೊನಾ ವೈರಸ್ನ ಆತಂಕದ ನಡುವೆಯೂ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಸುಸೂತ್ರವಾಗಿ ನಡೆಸುವಲ್ಲಿ ಭಾರತ್ ಸ್ಕೌಟ್ ಮತ್ತು ಗೈಡ್ಸ್ನ ವಿದ್ಯಾರ್ಥಿಗಳು-ಶಿಕ್ಷಕರು ನೀಡಿದ ಸೇವೆ ಶ್ಲಾಘನೀಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪಾಂಡು ಹೇಳಿದರು.
ಇಲ್ಲಿನ ಚನ್ನಬಸಪ್ಪ ಸಭಾಂಗಣದಲ್ಲಿ ನಡೆದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ತಾಲೂಕು ಘಟಕದ ವಾರ್ಷಿಕ ಮಹಾಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಸಭೆಗೆ ವೀಕ್ಷಕರಾಗಿ ಆಗಮಿಸಿದ್ದ ಜಿಲ್ಲಾ ಸ್ಕೌಟ್ಸ್ ಆಯುಕ್ತ ಜಿಮ್ಮಿ ಸಿಕ್ವೇರಾ, ಸ್ಥಳೀಯ ಸಂಸ್ಥೆ ಅಧ್ಯಕ್ಷ ಬಿ.ಎ. ಭಾಸ್ಕರ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಕೋವಿಡ್ ವಾರಿಯರ್ಸ್ಗಳಿಗೆ ಪ್ರಶಂಸಾ ಪತ್ರಗಳನ್ನು ವಿತರಿಸಲಾಯಿತು.
ವೇದಿಕೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹೆಚ್.ಎನ್. ಮಂಜುನಾಥ್, ಮುಖ್ಯ ಶಿಕ್ಷಕಿ ಎಂ.ಜೆ. ಅಣ್ಣಮ್ಮ, ಸ್ಥಳೀಯ ಸಂಸ್ಥೆಯ ಸದಸ್ಯರುಗಳಾದ ಸುಮಾ ಸುದೀಪ್, ಉಷಾ ತೇಜಸ್ವಿ, ಕಾರ್ಯದರ್ಶಿ ಟಿ.ಎಸ್. ಚಂದ್ರಶೇಖರ್, ಖಜಾಂಚಿ ಕೆ.ಟಿ. ಚಂದ್ರಕಲಾ, ಕುಶಾಲನಗರ ಸಂಸ್ಥೆಯ ಅಧ್ಯಕ್ಷ ಎನ್.ಎಲ್. ಸುರೇಶ್, ಕಾರ್ಯದರ್ಶಿ ದೇವಾನಂದ್ ಸೇರಿದಂತೆ ಇತರರು ಉಪಸ್ಥಿತರಿದ್ದರು.