ಸುಂಟಿಕೊಪ್ಪ,ಅ.6: ಸುಂಟಿಕೊಪ್ಪ ಚೆಸ್ಕಾಂ ಇಲಾಖೆಯ ಸಿಬ್ಬಂದಿಗಳು ಮತ್ತು ಕಾರ್ಮಿಕರು ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡುವ ಸರ್ಕಾರದ ನೀತಿಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು.
ಸುಂಟಿಕೊಪ್ಪ ಚೆಸ್ಕಾಂ ಇಲಾಖೆಯ ಮುಂಭಾಗದಲ್ಲಿ ಸೇರಿದ ಸಿಬ್ಬಂದಿಗಳು ವಿದ್ಯುತ್ ಇಲಾಖೆಯನ್ನು ಖಾಸಗೀಕರಣ ಮಾಡಲು ಸುಗ್ರೀವಾಜ್ಞೆ ತರಲು ಕೇಂದ್ರ ಸರ್ಕಾರ ಮುಂದಾಗಿ ರುವದನ್ನು ವಿರೋಧಿಸಿದರು.
ಕೇಂದ್ರ ಸರ್ಕಾರವು ಹಲವು ತಿಂಗಳುಗಳಲ್ಲಿ ಸರ್ಕಾರದ ಅಧೀನದ ವಿವಿಧ ವಲಯ ಮತ್ತು ಇಲಾಖೆಗಳನ್ನು ಖಾಸಗೀಕರಣ ಮಾಡಲು ಮುಂದಾಗಿದೆ. ಅದರಲ್ಲೂ ಸಾರ್ವಜನಿಕ ನಿರಂತರ ಸೇವೆಗಾಗಿಯೇ ಇರುವ ವಿದ್ಯುತ್ ಇಲಾಖೆಯನ್ನು ಖಾಸಗೀಕರಣ ಮಾಡುವುದರಿಂದ ಸಿಬ್ಬಂದಿಗಳಿಗೆ ಮಾತ್ರವಲ್ಲ ಸಾರ್ವಜನಿಕರಿಗೂ ಬಹಳಷ್ಟು ತೊಂದರೆಯಾಗಲಿದೆ ಎಂದು ಸಿಬ್ಬಂದಿಗಳು ಆರೋಪಿಸಿದರು.