ಉತ್ತರ ಪ್ರದೇಶದ ಹತ್ರಾಸ್ ಪ್ರಕರಣವನ್ನು ಖಂಡಿಸಿ ಮತ್ತು ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿ ಅ.9 ರಂದು ಸಂಘಟನೆ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಲಾಗುವುದು. ಅಂದು ಬೆಳಗ್ಗೆ 11 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳು ಹಾಗೂ ಪ್ರಧಾನಮಂತ್ರಿ ಗಳಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ದಿವಾಕರ್ ಹೇಳಿದರು. ಸಮಿತಿಯ ತಾಲೂಕು ಸಂಚಾಲಕ ಎ.ಪಿ. ದೀಪಕ್ ಮಾತನಾಡಿ ಅತ್ಯಾಚಾರ ಪ್ರಕರಣವನ್ನು ತೀವ್ರವಾಗಿ ಖಂಡಿಸಿದರು.
ಸುಂಟಿಕೊಪ್ಪ ಹೋಬಳಿ ಸಂಚಾಲಕ ಎಂ.ಎಸ್.ರವಿ, ಸಂಘಟನಾ ಸಂಚಾಲಕ ಎ.ಜಯಣ್ಣ, ಮೂರ್ನಾಡು ಹೋಬಳಿ ಸಂಚಾಲಕ ರಘು ಬೈರ ಹಾಗೂ ಮೂರ್ನಾಡು ಹೋಬಳಿ ಸಂಚಾಲಕ ದಿನೇಶ್ ಪೆಗ್ಗೋಲಿ ಉಪಸ್ಥಿತರಿದ್ದರು.