ಶನಿವಾರಸಂತೆ, ಅ. 6: ಸಮೀಪದ ಕೊಡ್ಲಿಪೇಟೆಯ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಜಾನಕಮ್ಮ ನಿವೃತ್ತಿ ಹೊಂದಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಕೆ. ಪಾಂಡು ಶಾಲೆಗೆ ಭೇಟಿ ನೀಡಿ ಅವರನ್ನು ಸನ್ಮಾನಿಸಿ ಗೌರವಿಸಿದರು.

ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಎನ್. ಮಂಜುನಾಥ್, ಪದವಿಪೂರ್ವ ಕಾಲೇಜಿನ ಮುಖ್ಯ ಶಿಕ್ಷಕ ಅಬ್ದುಲ್ ರಬ್, ಗೌಡಳ್ಳಿ ಕ್ಲಸ್ಟರ್‍ನ ಸಿಅರ್‍ಪಿ ಮನೋಹರ್, ಬೆಸೂರು ಪ್ರೌಢಶಾಲೆ ಮುಖ್ಯ ಶಿಕ್ಷಕ ರಾಘವೇಂದ್ರ ದೊಡ್ಡಕೊಡ್ಲಿ ಶಾಲೆಯ ಶಿಕ್ಷಕ ಮಹಮ್ಮದ್ ಫಯಾಜ್, ಸರ್ಕಾರಿ ಪ್ರೌಢಶಾಲೆ ಶಿಕ್ಷಕರು, ಸಿಬ್ಬಂದಿ ಹಾಜರಿದ್ದರು.