ಮಡಿಕೇರಿ, ಅ. 6: ಕೋವಿಡ್-19 (ಕೊರೋನಾ) ಹಿನ್ನೆಲೆಯಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿ, ಮಾಸ್ಕ್ ಧರಿಸದೇ ಇರುವವರ ವಿರುದ್ಧ ರೂ.500 ದಂಡ ವಿಧಿಸುವಂತೆ ಕರ್ನಾಟಕ ಸರ್ಕಾರವು ಆದೇಶ ಸಂಖ್ಯೆ: ಕಂಇ/158/ಟಿಎನ್‍ಆರ್/2020 ದಿನಾಂಕ:01.10.2020 ರಲ್ಲಿ ಸೂಚಿಸಿದೆ. ಕೊಡಗು ಜಿಲ್ಲೆಯಲ್ಲೂ ಸರ್ಕಾರದ ತಾ. 7 ರಿಂದ (ಇಂದಿನಿಂದ) ಕಡ್ಡಾಯವಾಗಿ ಜಾರಿಗೆ ತರಲಾಗುವುದು.
ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಲು ಸೂಚಿಸಲಾಗಿದೆ. ಮಾಸ್ಕ್ ಧರಿಸದೇ ಇರುವವರಿಗೆ ರೂ.500 ದಂಡ ವಿಧಿಸಲಾಗುವುದು. ಸಾರ್ವಜನಿಕರು ಪೊಲೀಸ್‍ರೊಂದಿಗೆ ಸಹಕರಿಸುವಂತೆ ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ.