ಕುಶಾಲನಗರ, ಅ. 6: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಕುಟುಂಬ ಸದಸ್ಯರ ನಿವಾಸಗಳ ಮೇಲೆ ಸಿಬಿಐ ದಾಳಿ ಖಂಡಿಸಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಎಸ್.ಅನಂತಕುಮಾರ್ ನೇತೃತ್ವದಲ್ಲಿ ನಗರ ಕಾಂಗ್ರೆಸ್ ಘಟಕ, ಐಎನ್‍ಟಿಯುಸಿ, ಕಾರ್ಮಿಕ ಘಟಕಗಳ ಸಂಯುಕ್ತಾಶ್ರಯದಲ್ಲಿ ನಾಡ ಕಚೇರಿ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಮಿಕ ಘಟಕದ ರಾಜ್ಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ, ರಾಜ್ಯ ಕಾರ್ಯದರ್ಶಿ ಅಜ್ಜಳ್ಳಿ ರವಿ, ನಗರ ಕಾಂಗ್ರೆಸ್ ಅಧ್ಯಕ್ಷ ಶರೀಫ್ ಇಬ್ರಾಹಿಂ, ಜಿಲ್ಲಾ ಪ್ರಮುಖರಾದ ಜರ್ನಾದÀನ್, ಗೋವಿಂದರಾಜ್ ದಾಸ್, ಗೀತಾ ಧರ್ಮಪ್ಪ, ತ್ರಿನೇಶ್, ದೇವ್, ರವಿ ಮತ್ತಿತರರು ಇದ್ದರು.