ಮಡಿಕೇರಿ, ಅ.6 : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮನೆ ಮೇಲೆ ಸಿಬಿಐ ಅಧಿಕಾರಿಗಳನ್ನು ಚೂ ಬಿಟ್ಟು ನಿರಂತರ ದಾಳಿ ನಡೆಸುವ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೀಳು ಮಟ್ಟದ ರಾಜಕಾರಣವನ್ನು ಪ್ರದರ್ಶಿಸು ತ್ತಿವೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ ಗುಜರಾತ್ ರಾಜಕೀಯ ಹಿನ್ನೆಲೆಯಲ್ಲಿ ಅಲ್ಲಿನ ಶಾಸಕರು ರಾಜ್ಯಕ್ಕೆ ಬಂದಿದ್ದ ಸಂದರ್ಭ ಕೂಡ ಡಿ.ಕೆ.ಶಿವಕುಮಾರ್ ಅವರ ಮನೆಯ ಮೇಲೆ ಐಟಿ ದಾಳಿ ನಡೆದಿತ್ತು. ಪ್ರಸ್ತುತ ಉಪಚುನಾವಣೆ ಘೋಷಣೆಯಾಗಿರುವುದರಿಂದ ಮತ್ತೊಮ್ಮೆ ಹತಾಶ ಮನೋೀಭಾವನೆ ಯಿಂದ ಸಿಬಿಐ ಮೂಲಕ ದಾಳಿ ನಡೆಸಿ ಪ್ರಬಲ ನಾಯಕನ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ ಎಂದು ಟೀಕಿಸಿದರು. ಇದನ್ನು ಖಂಡಿಸಿ ತಾ. 8 ರಂದು ಮಡಿಕೇರಿಯಲ್ಲಿ ಪ್ರತಿಭಟನಾ ಮೆರವಣಿಗೆ ಮತ್ತು ಗಾಂಧಿ ಮೈದಾನ ದಲ್ಲಿ ಸಭೆ ನಡೆಸಲಾಗುವುದೆಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಸದಸ್ಯರಾದ ಟಿ.ಪಿ.ರಮೇಶ್, ಸಂಯೋಜಕ ಹೆಚ್.ಎಂ. ನಂದಕುಮಾರ್, ಜಿಲ್ಲಾ ಕಾಂಗ್ರೆಸ್ ವಕ್ತಾರ ಎಸ್.ಐ.ಮುನೀರ್ ಅಹಮ್ಮದ್, ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷÀ ಕೆ.ಯು.ಅಬ್ದುಲ್ ರಜಾಕ್ ಹಾಗೂ ಜಿಲ್ಲಾ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷ ನೆರವಂಡ ಉಮೇಶ್ ಉಪಸ್ಥಿತರಿದ್ದರು.