ಮಡಿಕೇರಿ, ಅ. 7: ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಗೆ ಪಕ್ಷದ ಉಸ್ತುವಾರಿಯನ್ನು ಆಯಾ ಘಟಕದ ಅಧ್ಯಕ್ಷರಿಗೆ ನೀಡುವ ತೀರ್ಮಾನವನ್ನು ಜೆಡಿಎಸ್ ಕೈಗೊಂಡಿದೆ.

ಜಿಲ್ಲಾ ಜೆಡಿಎಸ್ ಸಭೆಯು ಜಿಲ್ಲಾಧ್ಯಕ್ಷ ಕೆ.ಎಂ. ಗಣೇಶ್ ಅಧ್ಯಕ್ಷತೆಯಲ್ಲಿ ನಡೆದು ಈ ನಿರ್ಧಾರ ಕೈಗೊಳ್ಳಲಾಯಿತಲ್ಲದೆ, ತಾಲೂಕು ಅಧ್ಯಕ್ಷರ ಕಾರ್ಯಾಚಟುವಟಿಕೆ ಕುರಿತೂ ಚರ್ಚಿಸಲಾಯಿತು.

ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಇಸಾಕ್ ಖಾನ್, ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಅದಿಲ್ ಪಾಷಾ, ಯುವ ಜೆಡಿಎಸ್ ಅಧ್ಯಕ್ಷ ವಿಶ್ವ, ಜಿಲ್ಲಾ ಹಿರಿಯ ಉಪಾಧ್ಯಕ್ಷ ಪಾಣತ್ತಲೆ ವಿಶ್ವನಾಥ್, ರಾಜ್ಯ ಸಂಘಟನಾ ಕಾರ್ಯದರ್ಶಿ ಮನ್ಸೂರ್ ಆಲಿ, ರಾಜ್ಯ ಹಿರಿಯ ಉಪಾಧ್ಯಕ್ಷ ಯಾಲದಾಳು ಮನೋಜ್ ಬೋಪಯ್ಯ, ಜಿಲ್ಲಾ ಖಜಾಂಚಿ ಡೆನ್ನಿ ಬರೋಸ್, ಮಡಿಕೇರಿ ತಾಲೂಕು ಅಧ್ಯಕ್ಷ ಬಲ್ಲಚಂಡ ಗೌತಮ್, ಸೋಮವಾರಪೇಟೆ ತಾಲೂಕು ಅಧ್ಯಕ್ಷ ನಾಗರಾಜ್, ವೀರಾಜಪೇಟೆ ತಾಲೂಕು ಅಧ್ಯಕ್ಷ ಮಂಜುನಾಥ್, ಜಿಲ್ಲಾ ಕಾರ್ಯದರ್ಶಿ ಎನ್.ಸಿ. ಸುನಿಲ್, ಮಹಿಳಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಆರ್.ಆರ್. ರುಬೀನಾ, ಜಿಲ್ಲಾ ಉಪಾಧ್ಯಕ್ಷ ಶಿವದಾಸ್ ಹಾಗೂ ಇತರರು ಪಾಲ್ಗೊಂಡಿದ್ದರು.