ಸೋಮವಾರಪೇಟೆ, ಅ. 7: ಸೋಮವಾರಪೇಟೆ ಪಟ್ಟಣ ವ್ಯಾಪ್ತಿಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಪಟ್ಟಣದಲ್ಲಿ ನಡೆಯುತ್ತಿದ್ದ ಸೋಮವಾರದ ಸಂತೆಯನ್ನು ಮುಂದಿನ 2 ವಾರಗಳ ಕಾಲ ಆರ್‍ಎಂಸಿ ಮಾರುಕಟ್ಟೆಗೆ ಸ್ಥಳಾಂತರಿಸಲು ಕ್ರಮ ವಹಿಸಲಾಗಿದೆ.
ಮುಂದಿನ 2 ಸೋಮವಾರಗಳಂದು ಆಲೇಕಟ್ಟೆ ರಸ್ತೆಯಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ವಾರದ ಸಂತೆ ನಡೆಯಲಿದ್ದು, ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪಾರ ವಹಿವಾಟಿನಲ್ಲಿ ಭಾಗವಹಿಸಬೇಕೆಂದು ಮುಖ್ಯಾಧಿಕಾರಿ ನಾಚಪ್ಪ ಮನವಿ ಮಾಡಿದ್ದಾರೆ.
ಶಾಸಕರೊಂದಿಗೆ ಸಮಾಲೋಚನೆ ನಡೆಸಿ, ತಕ್ಷಣದ ತೀರ್ಮಾನದಂತೆ ಎರಡು ವಾರದ ಸಂತೆ ಆರ್‍ಎಂಸಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಮುಂದಿನ ಬೆಳವಣಿಗೆಗಳನ್ನು ನೋಡಿಕೊಂಡು ಮತ್ತೆ ಪಟ್ಟಣದ ಹೈಟೆಕ್ ಮಾರುಕಟ್ಟೆಯಲ್ಲಿ ಸಂತೆ ನಡೆಸುವ ಬಗ್ಗೆ ತೀರ್ಮಾನಿಸಲಾಗುವದು ಎಂದು ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.