ಕುಶಾಲನಗರ, ಅ. 7: ಡಿ.ಕೆ. ಶಿವಕುಮಾರ್ ನಿವಾಸದ ಮೇಲೆ ನಡೆದ ಸಿಬಿಐ ದಾಳಿ ಖಂಡಿಸಿ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘ ಹಾಗೂ ಸ್ಥಳೀಯ ಕಾಂಗ್ರೆಸ್ ಘಟಕದ ಆಶ್ರಯದಲ್ಲಿ ಪ್ರತಿಭಟನೆ ನಡೆಯಿತು.

ಕಾಂಗ್ರೆಸ್ ಮುಖಂಡ ವಿ.ಪಿ.ಶಶಿಧರ್ ನೇತೃತ್ವದಲ್ಲಿ ಕುಶಾಲನಗರದ ಫೀಲ್ಡ್ ಮಾರ್ಷಲ್ ಕೆಎಂ ಕಾರ್ಯಪ್ಪ ವೃತ್ತದಲ್ಲಿ ಪ್ರತಿಭಟಿಸಿದ ಕಾರ್ಯಕರ್ತರು ಬಿಜೆಪಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭ ಮಾತನಾಡಿದ ವಿ.ಪಿ.ಶಶಿಧರ್, ಜಿಪಂ ಸದಸ್ಯ ಪಿ.ಎಂ.ಲತೀಫ್, ಬಿಜೆಪಿ ಸರಕಾರದ ವಿರುದ್ದ ಹರಿಹಾಯ್ದರು. ಉಪ ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ಸ್ವಾಯತ್ತ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ಡಿಕೆಶಿ ಅವರನ್ನು ಮಾನಸಿಕವಾಗಿ ಕುಗ್ಗಿಸುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಜಿ.ಪಂ. ಸದಸ್ಯೆ ಸುನಿತ, ಪ.ಪಂ. ಸದಸ್ಯ ಪ್ರಮೋದ್ ಮುತ್ತಪ್ಪ, ಡಿ.ಕೆ.ಶಿ. ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ನವೀದ್ ಖಾನ್ ಮತ್ತಿತರರು ಇದ್ದರು.