50 ಕ್ಕೇರಿದ ಸಾವಿನ ಸಂಖ್ಯೆ

ಮಡಿಕೇರಿ, ಅ. 7: ಮಡಿಕೇರಿಯ ಸುದರ್ಶನ್ ಅತಿಥಿ ಗೃಹದ ಬಳಿಯ ನಿವಾಸಿ 56 ವರ್ಷದ ಪುರುಷರೊಬ್ಬರು ಮೃತರಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 50 ಕ್ಕೇರಿದೆ.

ಜಿಲ್ಲೆಯಲ್ಲಿ ಹೊಸದಾಗಿ 104 ಕೊರೊನಾ ಪ್ರಕರಣಗಳು ವರದಿಯಾಗಿವೆ. ಇದುವರೆಗೆ 3363 ಪ್ರಕರಣಗಳು ವರದಿಯಾಗಿದ್ದು, 2674 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 50 ಮಂದಿ ಸಾವನ್ನಪ್ಪಿದ್ದು, 639 ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ 111 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, 83 ಮಂದಿ ಕೋವಿಡ್ ಕೇರ್ ಸೆಂಟರ್‍ನಲ್ಲಿ, 445 ಮಂದಿ ಹೋಮ್ ಐಸೋಲೇಷನ್‍ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ 549 ನಿಯಂತ್ರಿತ ವಲಯಗಳಿವೆ.