ಶನಿವಾರಸಂತೆ, ಅ. 7: ಜಿಲ್ಲಾ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮತ್ತು ಜಿಲ್ಲಾ ಮಕ್ಕಳ ಸಹಾಯವಾಣಿ ಕೇಂದ್ರದ ವತಿಯಿಂದ ಗೋಪಾಲಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾಗಮಿ ವಿದ್ಯಾರ್ಥಿಗಳಿಗೆ ಮಕ್ಕಳ ಹಕ್ಕು, ಮಕ್ಕಳ ಶಿಕ್ಷಣದ ಹಕ್ಕು ಹಾಗೂ ಮಕ್ಕಳ ರಕ್ಷಣೆಗೆ ಕುರಿತಾದ ಕಾಯ್ದೆಗಳು ಹಾಗೂ ಕೋವಿಡ್ ವೈರಸ್ ಕುರಿತು ಮಾಹಿತಿ ನೀಡಲಾಯಿತು.

ಕುಶಾಲನಗರ ಮಕ್ಕಳ ಸಹಾಯವಾಣಿ ಕೇಂದ್ರದ ಬಿ.ಕೆ. ಕುಮಾರಿ ಬಾಲಕ ಮತ್ತು ಬಾಲಕಿಯರಿಗೆ ಸಮಸ್ಯೆಯಾಗುವ ಸಂದರ್ಭದಲ್ಲಿ ಮಕ್ಕಳ ಸಹಾಯವಾಣಿ ಕೇಂದ್ರದ 1098 ಸಂಖ್ಯೆಗೆ ಉಚಿತ ಕರೆ ಮಾಡಿ ಮಾಹಿತಿ ನೀಡುವಂತೆ ಮನವಿ ಮಾಡಿದರು.

ಕೋವಿಡ್-19 ವೈರಸ್ ಮತ್ತು ಮುಂಜಾಗೃತೆ ಕುರಿತು ಮಕ್ಕಳ ಸಹಾಯವಾಣಿ ಕೇಂದ್ರದ ಯೋಗೇಶ್ ಮಾಹಿತಿ ನೀಡಿದರು. ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕ ಟಿ.ಕೆ. ಸ್ವಾಮಿ, ಶಿಕ್ಷಕರಾದ ಸುಧಾ, ಮಾಲತಿ ಮುಂತಾದವರಿದ್ದರು.