ವೀರಾಜಪೇಟೆ, ಅ. 7: ಗಾಂಧಿ ಜಯಂತಿ ಪ್ರಯುಕ್ತ ತಾಲೂಕಿನ ಬಿಟ್ಟಂಗಾಲ ಗ್ರಾಮದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸ್ವಚ್ಛತಾ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಸೇವಾ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು, ಹಿಂದು ಜಾಗರಣ ವೇದಿಕೆ ಸದಸ್ಯರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಸದಸ್ಯರು, ಬಿಜೆಪಿ ಮಹಿಳಾ ಮೋರ್ಚಾ, ಬಿಜೆಪಿ ಯುವ ಮೋರ್ಚಾ ಸದಸ್ಯರು, ಸ್ಥಳೀಯರು ಭಾಗಿಯಾಗಿದ್ದರು.

ವೀರಾಜಪೇಟೆಯ ಕಾವೇರಿ ಕಾಲೇಜು ಬಳಿಯಿಂದ ಗೋಣಿಕೊಪ್ಪಲುವಿಗೆ ತೆರಳುವ ಮುಖ್ಯರಸ್ತೆಯ ಬದಿ 5 ಕಿ.ಮೀ. ಅಂತರದಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು. ಈ ಸಂದರ್ಭ ವೀರಾಜಪೇಟೆ ತಾಲೂಕು ಬಿಜೆಪಿ ಅಧ್ಯಕ್ಷ ನೆಲ್ಲಿರ ಚಲನ್ ಮತ್ತಿತರರು ಹಾಜರಿದ್ದರು.