ಮಡಿಕೇರಿ, ಅ. 8: ವೀರಾಜಪೇಟೆ ತಾಲೂಕಿನ ಬಿರುನಾಣಿ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಬೀಟೆ ಮರ ಕಳ್ಳತನ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಅಪರಾಧ ಪತ್ತೆದಳದ ಅಧಿಕಾರಿ ಹಾಗೂ ಸಿಬ್ಬಂದಿಯವರು ಯಶಸ್ವಿಯಾಗಿದ್ದಾರೆ.

ಖಚಿತ ಮಾಹಿತಿ ಮೇರೆ ಡಿಸಿಐಬಿ ಅಧಿಕಾರಿ ಹಾಗೂ ಸಿಬ್ಬಂದಿಗಳು ಶ್ರೀಮಂಗಲ ಠಾಣಾ ವ್ಯಾಪ್ತಿಯ ಬಿರುನಾಣಿ ಗ್ರಾಮದ ನಿವಾಸಿ ಕುಪ್ಪಣಮಾಡ ರವೀಂದ್ರ (ಮಧು) ಅವರ ಕಾಫಿ ತೋಟದಲ್ಲಿ ಬಿದ್ದಿದ್ದ ಬೀಟೆ ಮರವನ್ನು ನಾಟಾಗಳನ್ನಾಗಿ ಮಾಡಿ ಅಕ್ರಮವಾಗಿ ಸಾಗಾಟ ಮಾಡಿ ಉಳಿದಿದ್ದ ಅಂದಾಜು ರೂ. 1 ಲಕ್ಷ ಮೌಲ್ಯದ 5 ಬೀಟೆ ನಾಟಾಗಳನ್ನು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಶ್ರೀಮಂಗಲ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಕುಟ್ಟ ಪೂಜೆಕಲ್ಲು ನಿವಾಸಿ ಕುಂಞಪು ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ತೋಟದ ಮಾಲೀಕ ಕುಪ್ಪಣಮಾಡ ರವೀಂದ್ರ ತಲೆಮರೆಸಿ ಕೊಂಡಿದ್ದಾನೆ. ತಲೆಮರೆಸಿಕೊಂಡ ಇತರ ಆರೋಪಿ ಗಳ ಶೋಧ ಕಾರ್ಯ ಮುಂದುವ ರಿದಿದೆ. ಬಿರುನಾಣಿ ವ್ಯಾಪ್ತಿಯಲ್ಲಿ ನಿರಂತರ ವಾಗಿ ಬೆಲೆ ಬಾಳುವ ಮರ ಗಳ ಅಕ್ರಮ ಸಾಗಾಟ ನಡೆಯುತ್ತಿರುವ ಬಗ್ಗೆ ಶಂಕೆಯಿದ್ದು, ಈ ಬಗ್ಗೆ ಇಲಾಖೆ ತೀವ್ರ ನಿಗಾ ಇರಿಸಲಾಗಿದೆ.

ಜಿಲ್ಲಾ ಪೆÇಲೀಸ್ ಅಧೀಕ್ಷಕಿ ಕ್ಷಮಾ ಮಿಶ್ರಾ ಅವರ ಮಾರ್ಗದರ್ಶನದಲ್ಲಿ ಡಿಸಿಐಬಿ ನಿರೀಕ್ಷಕ ಎನ್. ಕುಮಾರ್ ಆರಾಧ್ಯ, ಪೆÇಲೀಸ್ ಉಪ ನಿರೀಕ್ಷಕ ಹೆಚ್.ವಿ. ಚಂದ್ರಶೇಖರ್, ಎಎಸ್‍ಐ ಕೆ.ವೈ. ಹಮೀದ್ ಸಿಬ್ಬಂದಿಗಳಾದ ಕೆ.ಎಸ್. ಅನಿಲ್ ಕುಮಾರ್, ವಿ.ಜಿ. ವೆಂಕಟೇಶ್, ಬಿ.ಎಲ್. ಯೊಗೇಶ್ ಕುಮಾರ್, ಕೆ.ಆರ್. ವಸಂತ, ಎಂ.ಎನ್. ನಿರಂಜನ್, ಬಿ.ಜೆ. ಶರತ್ ರೈ, ಸುರೇಶ್ ಹಾಗೂ ಚಾಲಕ ಕೆ.ಎಸ್. ಶಶಿಕುಮಾರ್ ಕಾರ್ಯಾ ಚರಣೆಯಲ್ಲಿ ಭಾಗವಹಿಸಿದ್ದರು.