ನವದೆಹಲಿ, ಅ. 8: ಕಳೆದ ತಿಂಗಳು ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ ಅವರು ಮೃತಪಟ್ಟಿದ್ದು, ಈ ಬೆನ್ನಲ್ಲೇ ಮತ್ತೋರ್ವ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ವಿಧಿವಶರಾಗಿದ್ದಾರೆ.

74 ವರ್ಷದ ರಾಮ್ ವಿಲಾಸ್ ಪಾಸ್ವಾನ್ ಅವರು ಕೆಲ ವಾರಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದು, ಇತ್ತೀಚೆಗಷ್ಟೇ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ಆದರೆ ಇದೀಗ ಅವರು ಮೃತಪಟ್ಟಿ ದ್ದಾರೆ ಎಂದು ಪಾಸ್ವಾನ್ ಪುತ್ರ ಚಿರಾಗ್ ಮಾಹಿತಿ ನೀಡಿದ್ದಾರೆ. ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನ(ಮೊದಲ ಪುಟದಿಂದ) ಲೋಕ್ ಜನಶಕ್ತಿ ಪಾರ್ಟಿ (ಎಲ್‍ಜೆಪಿ) ಮುಖ್ಯಸ್ಥ, ದಲಿತ ನಾಯಕ ರಾಮ್ ವಿಲಾಸ್ ಪಾಸ್ವಾನ್ ಅವರು 5 ದಶಕಗಳಿಂದ ರಾಜಕೀಯದಲ್ಲಿ ಸಕ್ರಿಯರಾಗಿದ್ದರು. ಎನ್‍ಡಿಎ ಮೈತ್ರಿಕೂಟದಲ್ಲಿದ್ದ ಎಲ್‍ಜೆಪಿ ಪಕ್ಷದಿಂದ ಪಾಸ್ವಾನ್ ಅವರು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.