*ಸಿದ್ದಾಪುರ, ಅ. 8: ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಸಂಘದ ಜಾಗದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಲು ಉದ್ದೇಶಿಸಲಾಗಿದ್ದು, ಬೋರ್‍ವೆಲ್ ತೆಗೆಯುವ ಕಾರ್ಯಕ್ಕೆ ಇಂದು ಚಾಲನೆ ನೀಡಲಾಯಿತು. ಸಂಘದ ವತಿಯಿಂದ ರೂ. 3 ಲಕ್ಷ ವೆಚ್ಚದಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದ್ದು, ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ನಿರ್ದೇಶಕರುಗಳು, ಸಿಬ್ಬಂದಿಗಳು ಯೋಜನೆಗೆ ಚಾಲನೆ ನೀಡಿದರು.

-ಸುಧಿ