ಮಡಿಕೇರಿ, ಅ.9 : ಕೊಡಗು ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳು ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಈ ಸಂದರ್ಭ ಸ್ವೀಕರಿಸಲಾಗುತ್ತದೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಹೆಚ್ಚಿನ ವಿವರಗಳಿಗೆ ನಗರದ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ, ಮಡಿಕೇರಿ ದೂರವಾಣಿ ಸಂಖ್ಯೆ 08272-220797 ಸಂಪರ್ಕಿಸಬಹುದಾಗಿದೆ.

ಲೋಕಾಯುಕ್ತ ವಿಭಾಗದ ಅಧಿಕಾರಿಗಳ ತಾಲೂಕುವಾರು ಭೇಟಿ ಕಾರ್ಯಕ್ರಮದ ವಿವರ ಇಂತಿದೆ. ತಾ. 13 ರಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಸೋಮವಾರಪೇಟೆ ತಾಲೂಕಿನ ತಹಶೀಲ್ದಾರ್ ಕಚೇರಿ, ತಾ. 14 ರಂದು ಬೆಳಗ್ಗೆ 11 ರಿಂದ 1 ಗಂಟೆಯವರೆಗೆ ವೀರಾಜಪೇಟೆ ತಾಲೂಕು ತಹಶೀಲ್ದಾರರ ಕಚೇರಿ, ತಾ. 15 ರಂದು ಬೆಳಗ್ಗೆ 11 ರಿಂದ 1 ಗಂಟೆಯವರೆಗೆ ಮಡಿಕೇರಿ ತಾಲೂಕು ತಹಶೀಲ್ದಾರರ ಕಚೇರಿಗೆ ಭೇಟಿ ನೀಡಲಿದ್ದಾರೆ ಎಂದು ಮಡಿಕೇರಿ ಲೋಕಾಯುಕ್ತ ಉಪಾಧೀಕ್ಷಕರು ತಿಳಿಸಿದ್ದಾರೆ.