ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ
ಮಡಿಕೇರಿ, ಅ. 8: ಕಾಫಿ ಮಂಡಳಿ ವತಿಯಿಂದ ಕೈಗೊಳ್ಳಲಾದ ಬೆಳೆ ಸಮೀಕ್ಷೆಯಲ್ಲಿ ಮಕ್ಕಂದೂರು, ಕಡಗದಾಳು, ಮರಗೋಡು, ಹಾಕತ್ತೂರು ಗ್ರಾಮಗಳನ್ನು ಕೈಬಿಡಲಾಗಿದೆ. ಈ ಗ್ರಾಮಗಳನ್ನು ಕೂಡ ಪಟ್ಟಿಯಲ್ಲಿ ಸೇರಿಸಿಕೊಳ್ಳುವಂತೆ ಆಗ್ರಹಿಸಿ ನಾಲ್ಕು ಗ್ರಾಮಗಳ ಗ್ರಾಮಸ್ಥರು ಸೇರಿ ತಾ. 9 ರಂದು (ಇಂದು) ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ.
ಕೈಬಿಟ್ಟ ಗ್ರಾಮಗಳನ್ನು ಪಟ್ಟಿಯಲ್ಲಿ ಸೇರ್ಪಡೆಗೊಳಿಸುವಂತೆ ಆಗ್ರಹಿಸಿ ಕಾಫಿ ಮಂಡಳಿ ಸೇರಿದಂತೆ ತೋಟಗಾರಿಕೆ, ಕೃಷಿ ಇಲಾಖೆ ಅಧಿಕಾರಿಗಳಿಗೂ ಮನವಿ ಸಲ್ಲಿಸಲಾಗುವುದೆಂದು ಗ್ರಾಮಸ್ಥರ ಪರವಾಗಿ ಎನ್.ಎ. ರವಿ ಬಸಪ್ಪ ತಿಳಿಸಿದ್ದಾರೆ.