ಶನಿವಾರಸಂತೆ ಅ. 9: ಗೌಡಳ್ಳಿ ಪಂಚಾಯಿತಿ ವ್ಯಾಪ್ತಿಯ ಶಾಂತವೇರಿ ಗ್ರಾಮದ ಸಾರ್ವಜನಿಕ ರಸ್ತೆಯಲ್ಲಿ ಗುರುವಾರ ರಾತ್ರಿ ಸುರ್ಜೀತ್ ಎಂಬವರು ತಮ್ಮ ಬೈಕ್‍ನಲ್ಲಿ ತೆರಳುತ್ತಿದ್ದಾಗ ನಾಯಿಯೊಂದು ಅಡ್ಡ ಬಂದ ಕಾರಣ ಅವಘಡ ಸಂಭವಿಸಿ ಸುರ್ಜೀತ್ ಗಾಯಗೊಂಡಿದ್ದಾರೆ.
ಗಾಯಾಳುವನ್ನು ಬೆಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಶನಿವಾರಸಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.