ಸಿದ್ದಾಪುರ, ಅ. 9: ಸಿದ್ದಾಪುರದ ಅಂಬೇಡ್ಕರ್ ನಗರದ ಅಂಗನವಾಡಿ ಕೇಂದ್ರದಲ್ಲಿ ಪೋಷಣ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಬಾಣಂತಿಯರ ರಕ್ತ ಹೀನತೆ, ಮಕ್ಕಳ ಅಪೌಷ್ಟಿಕತೆ ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವಿವರಿಸಲಾಯಿತು. ಕಾರ್ಯಕ್ರಮದಲ್ಲಿ ಬಾಲವಿಕಾಸ ಸಮಿತಿಯ ಅಧ್ಯಕ್ಷೆ ರೇಖಾ, ಆರೋಗ್ಯಕರ್ತರಾದ ಶಾರದ, ಸುನಿತ, ಅನಿತ, ಪುಷ್ಪ, ಶೈನಿ, ಅಂಗನವಾಡಿ ಕಾರ್ಯಕರ್ತೆ ಸುಜಾತ ಸೇರಿದಂತೆ ಇನ್ನಿತರರು ಇದ್ದರು.