ಮಡಿಕೇರಿ, ಅ. 9: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವಕ್ತಾರ ರಾಗಿ ಹೈಕೋರ್ಟ್ ವಕೀಲ, ಹಿರಿಯ ರಾಜಕಾರಣಿ ಚಂದ್ರಮೌಳಿ ಅವರನ್ನು ನೇಮಕ ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಈ ನೇಮಕಾತಿ ಮಾಡಿ ಆದೇಶ ಹೊರಡಿಸಿದ್ದಾರೆ.