ಬೆಂಗಳೂರಿನಲ್ಲಿ ಐಸಿಸ್ ಉಗ್ರರ ಬಂಧನ
ಬೆಂಗಳೂರು, ಅ. 8: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಸ್ಲಾಮಿಕ್ ಸ್ಟೇಟ್ (ಐಸಿಸ್) ಸಂಘಟನೆಗೆ ಸೇರಿದ ಇಬ್ಬರು ಶಂಕಿತ ಉಗ್ರರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ತಮಿಳುನಾಡು ಮೂಲದ ಅಹಮದ್ ಅಬ್ದುಲ್ ಖಾದರ್ (40) ಹಾಗೂ ಬೆಂಗಳೂರಿನ ಫ್ರೆಜರ್ ಟೌನ್ ವಾಸಿ ಇರ್ಫಾನ್ ನಾಸಿರ್ (33) ಎನ್ನುವ ಇಬ್ಬರನ್ನು ಎನ್ಐಎ ಬಂಧಿಸಿದೆ. ಇದರಲ್ಲಿ ಬೆಂಗಳೂರಿನ ಇರ್ಫಾನ್ ಅಕ್ಕಿ ವ್ಯಾಪಾರ ನಡೆಸಿದ್ದರೆ, ಅಬ್ದುಲ್ ಖಾದರ್ ಚೆನ್ನೈನ ಬ್ಯಾಂಕ್ ಒಂದರಲ್ಲಿ ಉದ್ಯೋಗದಲ್ಲಿದ್ದ. ಇಬ್ಬರ ಮನೆಗಳಿಂದ ಕೆಲವಷ್ಟು ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ದೇಶಾದ್ಯಂತ ವಿಧ್ವಂಸಕ ಕೃತ್ಯ ನಡೆಸುವ ಸಂಚಿನ ಹಿನ್ನೆಲೆ ಅವರ ಬಂಧನವಾಗಿದ್ದು ತನಿಖೆಯಿಂದ ಇನ್ನಷ್ಟು ವಿವರ ಹೊರಬರಲಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಪೊಲೀಸರೊಂದಿಗೆ ಬಿಜೆಪಿ ಘರ್ಷಣೆ
ಕೋಲ್ಕತಾ, ಅ. 8: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಪೆÇಲೀಸರ ನಡುವೆ ಗುರುವಾರ ಹಿಂಸಾತ್ಮಕ ಘರ್ಷಣೆ ನಡೆದಿದ್ದು, ಪೆÇಲೀಸರು ಕಾರ್ಯಕರ್ತರಿಂದ ಬಂದೂಕು ವಶಪಡಿಸಿಕೊಂಡಿದ್ದಾರೆ. ಬಿಜೆಪಿ ಕಾರ್ಯಕರ್ತರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಪಶ್ಚಿಮ ಬಂಗಾಳ ಸಚಿವಾಲಯದ ಕಡೆಗೆ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದರು. ಆದರೆ ಪೆÇಲೀಸರು ಪ್ರತಿಭಟನಾಕಾರರನ್ನು ತಡೆದಿದ್ದಾರೆ. ಇದರಿಂದ ಆಕ್ರೋಶಗೊಂಡ ಕೇಸರಿ ಪಕ್ಷದ ಕಾರ್ಯಕರ್ತರು ಬ್ಯಾರಿಕೇಡ್ಗಳನ್ನು ಭೇದಿಸಲು ಯತ್ನಿಸಿದ್ದಾರೆ. ಈ ವೇಳೆ ಪೆÇಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ಸಂಭವಿಸಿದೆ ಎಂದು ಪೆÇಲೀಸರು ತಿಳಿಸಿದ್ದಾರೆ. ಮೂಲಗಳ ಪ್ರಕಾರ, ಪೆÇಲೀಸರು ಹೌರಾದ ಸಂತಗಾಚಿಯಲ್ಲಿ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಬಿಜೆಪಿ ಕಾರ್ಯಕರ್ತರ ಮೇಲೆ ಅಶ್ರುವಾಯು, ನೀರಿನ ಫಿರಂಗಿಯನ್ನು ಬಳಸಿದ್ದಾರೆ. ಇದಕ್ಕೆ ಜಗ್ಗದ ಪಕ್ಷದ ಬೆಂಬಲಿಗರು ಬಂಗಾಳ ಪೆÇಲೀಸರೊಂದಿಗೆ ಘರ್ಷಣೆಗಿಳಿದ್ದಾರೆ. ಈ ವೇಳೆ ಪ್ರತಿಭಟನಾಕಾರರಲ್ಲಿ ಒಬ್ಬರಿಂದ ಬಂದೂಕನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರವಾಸೋದ್ಯಮ ಅಭಿವೃದ್ಧಿಗೆ ಸಿಎಂ ಸೂಚನೆ
ಬೆಂಗಳೂರು, ಅ. 8: ರಾಜ್ಯದ ಪ್ರವಾಸೋದ್ಯಮ ಕೇಂದ್ರಗಳನ್ನು ಗುರುತಿಸಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸಮಗ್ರ ವರದಿಯೊಂದನ್ನು ಸಲ್ಲಿಸಿ ಅನುಮತಿ ಪಡೆಯುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪ್ರವಾಸೋದ್ಯಮ ಇಲಾಖೆ ಪ್ರಮುಖ ಯೋಜನೆಗಳಿಗೆ ಸಂಬಂಧಿಸಿದಂತೆ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈಗಾಗಲೇ ಗುರುತಿಸಲಾಗಿರುವ ಪ್ರವಾಸೋದ್ಯಮ ಕೇಂದ್ರಗಳ ಸಮಗ್ರ ಅಭಿವೃಧ್ಧಿಗೆ ಇರುವ ತೊಡಕುಗಳನ್ನು ಚರ್ಚಿಸಿ ನಿರ್ಣಯ ಕೈಗೊಳ್ಳಲು ಅನುಮತಿ ನೀಡಿದರು. ಈ ನಿಟ್ಟಿನಲ್ಲಿ ಅಗತ್ಯ ತಿದ್ದುಪಡಿಯೊಂದಿಗೆ ಪ್ರಸ್ತಾವನೆಯನ್ನು ಮಂಡಿಸಲು ಅಧಿಕಾರಿಗಳಿಗೆ ಅವರು ನಿರ್ದೇಶನ ನೀಡಿದರು. ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿರುವ ಜಿಲ್ಲೆಗಳನ್ನು ಗುರುತಿಸಿ ಅಧಿಕಾರಿಗಳನ್ನು ನಿಯೋಜಿಸುವಂತೆ ಇಲಾಖಾ ಸಚಿವ ಸಿ.ಟಿ.ರವಿ ಮುಖ್ಯಮಂತ್ರಿಗಳನ್ನು ಕೋರಿದರು. ಜಿಲ್ಲೆಗಳಲ್ಲಿ ಅಧಿಕಾರಿಗಳಿಲ್ಲದೆ ಪ್ರಗತಿ ಪರಿಶೀಲನೆ ಅಸಾಧ್ಯವಾಗಿದೆ ಎಂಬ ಅಂಶವನ್ನು ಅವರು ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಗಮನಕ್ಕೆ ತಂದರು.
ಟಿಆರ್ಪಿ ದಂಧೆ : ಇಬ್ಬರ ಬಂಧನ
ಮುಂಬೈ, ಅ. 8: ಟೆಲಿವಿಷನ್ ರೇಟಿಂಗ್ ಪಾಯಿಂಟ್ಸ್ (ಟಿಆರ್ಪಿ) ತಿರುಚುವಿಕೆ ದಂಧೆ ನಡೆಯುತ್ತಿರುವುದಾಗಿ ಆರೋಪಿಸಿ ಮುಂಬೈ ಪೆÇಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಟಿಆರ್ಪಿ ಯಾವ ಟಿವಿ ಕಾರ್ಯಕ್ರಮಗಳನ್ನು ಜನರು ಹೆಚ್ಚು ವೀಕ್ಷಿಸುತ್ತಾರೆ ಎಂಬುದನ್ನು ನಿರ್ಣಯಿಸುವ ಸಾಧನವಾಗಿದೆ ಮತ್ತು ನಿರ್ದಿಷ್ಟ ಚಾನಲ್ನ ವೀಕ್ಷಕರ ಆಯ್ಕೆ ಮತ್ತು ಜನಪ್ರಿಯತೆಯನ್ನು ಇದು ಸೂಚಿಸುತ್ತದೆ. ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಮುಂಬೈ ಪೆÇಲೀಸರು ಮತ್ತು ಮಹಾರಾಷ್ಟ್ರ ಸರ್ಕಾರದ ಮೇಲೆ ನಡೆಸಿದ ದಾಳಿಯ ಬಗ್ಗೆ ರಿಪಬ್ಲಿಕ್ ಟಿವಿ ಚಾನಲ್ ಟಿಆರ್ಪಿ ದಂಧೆಯಲ್ಲಿ ಭಾಗಿಯಾಗಿದೆ ಎಂದು ಮುಂಬೈ ಪೆÇಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಸುದ್ದಿಗಾರರಿಗೆ ತಿಳಿಸಿದರು.
ಅಭಿವ್ಯಕ್ತಿ ಸ್ವಾತಂತ್ರ್ಯ ದುರುಪಯೋಗ
ನವದೆಹಲಿ, ಅ. 8: ಅಭಿವ್ಯಕ್ತಿ ಸ್ವಾತಂತ್ರ್ಯ ಎಂಬವುದು ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ದುರುಪಯೋಗವಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ತಬ್ಲಿಘಿಗಳಿಗೆ ಸಂಬಂಧಿಸಿದ ಅರ್ಜಿ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಈ ರೀತಿ ಹೇಳಿದ್ದು, ತಬ್ಲಿಘಿ ಜಮಾತ್ ನ ಕಾರ್ಯಕ್ರಮದ ಕುರಿತು ಮಾಧ್ಯಮಗಳ ವರದಿಯ ಕುರಿತು ತಪ್ಪಿಸಿಕೊಳ್ಳುವ ಹಾಗೂ ನಿರ್ಲಜ್ಜ ಪ್ರಮಾಣಪತ್ರವನ್ನು ಸಲ್ಲಿಸಿರುವ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೋಬ್ಡೆ ಅವರಿದ್ದ ಪೀಠ, ಜಮೈತ್ ಉಲಾಮ-ಎ-ಹಿಂದ್ ಹಾಗೂ ಇತರರು ಮಾಧ್ಯಮಗಳಲ್ಲಿ ತಬ್ಲಿಘಿ ಜಮಾತ್ನ ಸಭೆಯ ಕುರಿತ ಕಾರ್ಯಕ್ರಮಗಳ ಮೂಲಕ ಕೋಮುದ್ವೇಷ ಹರಡುತ್ತಿದ್ದಾರೆ ಎಂದು ಆರೋಪಿಸಿ ಕೋರ್ಟ್ ಮೆಟ್ಟಿಲೇರಿದ್ದರು. ಈ ಬಗ್ಗೆ ಕೋರ್ಟ್ ಪ್ರತಿಕ್ರಿಯೆ ನೀಡಿ ಇತ್ತೀಚಿನ ದಿನಗಳಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ವಾಕ್ ಸ್ವಾತಂತ್ರ್ಯವನ್ನು ಅತಿ ಹೆಚ್ಚು ದುರುಪಯೋಗ ಪಡಿಸಿಕೊಳ್ಳಲಾಗಿದೆ ಎಂದು ಹೇಳಿದೆ.
ಸಿಎಂ ಖಾತೆಗೆ ಕನ್ನ ಹಾಕಲು ಯತ್ನಿಸಿದವರ ಬಂಧನ
ಮಂಗಳೂರು, ಅ. 8: ಆಂಧ್ರ ಪ್ರದೇಶ ಮುಖ್ಯಮಂತ್ರಿ ಖಾತೆಗೆ ಕನ್ನ ಹಾಕಲು ಹೋದ ಕರಾವಳಿ ನಿರ್ದೇಶಕ ಉದಯ್ ಕುಮಾರ್ ಸೇರಿ ಆರು ಜನರನ್ನು ಪೆÇಲೀಸರು ಬಂಧಿಸಿದ್ದಾರೆ. ಮೂಡಬಿದಿರೆ ನಿವಾಸಿ ಯೋಗಿಶ್ ಆಚಾರ್ಯ, ನಿರ್ದೇಶಕ ಉದಯ ಶೆಟ್ಟಿ ಕಾಂತಾವರ, ಮಂಗಳೂರಿನ ಬ್ರಿಜೇಶ್ ರೈ, ಬೆಳ್ತಂಗಡಿಯ ಗಂಗಾಧರ್ ಸುವರ್ಣ ಬಂಧಿತ ಆರೋಪಿಗಳು. ಈ ತಂಡ ಬರೋಬ್ಬರಿ 52 ಕೋಟಿ ರೂಪಾಯಿಯ ಫೇಕ್ ಚೆಕ್ ಸೃಷ್ಟಿ ಮಾಡಿತ್ತು. ಆಂಧ್ರ ಸಿಎಂ ರಿಲೀಫ್ ಫಂಡ್ ನೀಡಿದ ಚೆಕ್ ಇದು ಎಂದು ಹೇಳಿ ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದ್ರೆಯ ಬ್ಯಾಂಕ್ ನಲ್ಲಿ ಡ್ರಾ ಮಾಡಲು ಮುಂದಾಗಿತ್ತು. ಆಂಧ್ರ ಸಿಎಂ ರಿಲೀಫ್ ಫಂಡ್ ನಿಂದ 58 ಕೋಟಿ ರೂಪಾಯಿ ವಿತ್ ಡ್ರಾ ಆಗುತ್ತಿದೆ ಎನ್ನುವ ವಿಚಾರ ಬ್ಯಾಂಕ್ ನವರಿಗೆ ಸಾಕಷ್ಟು ಅನುಮಾನ ಮೂಡಿಸಿತ್ತು. ಈ ಬಗ್ಗೆ ಬ್ಯಾಂಕ್ ಮ್ಯಾನೇಜರ್ ಆಂಧ್ರ ಸರ್ಕಾರದ ಜೊತೆ ಮಾತನಾಡಿದ್ದರು. ಈ ವೇಳೆ ಅಷ್ಟು ಮೊತ್ತದ ಚೆಕ್ ಕೊಟ್ಟಿಲ್ಲ ಎಂದು ಸಿಎಂ ಕಚೇರಿ ಸ್ಪಷ್ಟನೆ ನೀಡಿತ್ತು.
ಪಾಳು ಜಮೀನಿನಲ್ಲಿ ಕಂತೆ ಕಂತೆ ಹಣ ಪತ್ತೆ
ಚಿತ್ರದುರ್ಗ, ಅ. 8: ಪಾಳುಬಿದ್ದ ಜಮೀನಿನಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿ ಅಚ್ಚರಿ ಮೂಡಿಸಿರುವ ಪ್ರಕರಣ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಬುಕ್ಲಾರಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಇಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಅಚಾನಕ್ಕಾಗಿ ಪೆÇಲೀಸರಿಗೆ ಕರೆ ಮಾಡಿದ ಅನಾಮಧೇಯ ವ್ಯಕ್ತಿಯೋರ್ವ ಜಮೀನಿನಲ್ಲಿ ಕಂತೆ ಕಂತೆ ಹಣ ಬಿದ್ದಿರುವ ಮಾಹಿತಿ ತಿಳಿಸಿದ್ದಾನೆ. ಈ ವಿಷಯ ತಿಳಿದು ಸ್ಥಳಕ್ಕೆ ಧಾವಿಸಿರುವ ಠಾಣೆಯ ಪೆÇಲೀಸರಿಗೆ ನಿಜಕ್ಕೂ ಅಲ್ಲಿ ಅಚ್ಚರಿ ಕಾದಿತ್ತು. ಸ್ಥಳಕ್ಕೆ ಬಂದ ಪೆÇಲೀಸರಿಗೆ 2000, 500, 100, ಹಾಗೂ 50 ರೂಪಾಯಿಗಳ ಕಂತೆ ಕಂತೆ ದುಡ್ಡು ಸಿಕ್ಕಿತ್ತು. ಮೊಳಕಾಲ್ಮೂರು ಹಾಗೂ ಚಳ್ಳಕೆರೆ ಮಾರ್ಗ ಮಧ್ಯೆ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ನಿರ್ವಹಣೆ ಮಾಡುತ್ತಿರುವ ದಿಲೀಪ್ ಬಿಲ್ಡ್ ಕಾನ್ ಕಂಪನಿಯಲ್ಲಿ ಕಳೆದ ಮೂರು ದಿನಗಳ ಹಿಂದೆ ಬರೋಬ್ಬರಿ 36,60,000 ಹಣ ಕಳ್ಳತನ ಆಗಿತ್ತು. ಕಳ್ಳರು ಕಂಪನಿಯ ಕ್ಯಾಷ್ ರೂಮಿನ ಛಾವಣಿ ಮುರಿದು ಕಳ್ಳತನ ಮಾಡಿದ್ದರು. ಈ ಬಗ್ಗೆ ಕಂಪನಿ ವ್ಯವಸ್ಥಾಪಕರು ಸಹ ತಳಕು ಪೆÇಲೀಸ್ ಠಾಣೆಯಲ್ಲಿ ಕಳ್ಳತನವಾಗಿರುವ ಬಗ್ಗೆ ಪ್ರಕರಣ ದಾಖಲಿಸಿದ್ದರು.